ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ‘ಅತಿದೊಡ್ಡ ಷೇರು ಮಾರುಕಟ್ಟೆ ಹಗರಣ’ ಆರೋಪಕ್ಕೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಗುರುವಾರ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ,
ಈ ಕುರಿತು ಮಾತನಾಡಿದ ಅವರು ಮೊನ್ನೆ ನಡೆದ ಚುನಾವಣೆಯ ಸೋಲನ್ನು ‘ಜೀರ್ಣಿಸಿಕೊಳ್ಳಲು’ ಸಾಧ್ಯವಾಗದೇ ಹೂಡಿಕೆದಾರರನ್ನು ದಾರಿತಪ್ಪಿಸಲು ಪಿತೂರಿ ನಡೆಸುತ್ತಿದ್ದಾರೆ ಎಂದು ಹೇಳಿದರು. ದಾಖಲೆಯ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗುವುದನ್ನು ಸಹಿಸಿಕೊಳ್ಳಲು ಆಗದ ಹಿನ್ನೆಲೆಯಲ್ಲಿ ಈ ರೀತಿಯಾಗಿ ಹೇಳಿಕೆಗಳನ್ನು ನೀಡಿ ಹೂಡಿಕೆದಾರರನ್ನು ದಾರಿ ತಪ್ಪಿಸುವ ಕೆಲಸ ಮಾಡುತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಅವರ ಆರೋಪದ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಪಿಯೂಷ್ ಗೋಯಲ್, ಕಾಂಗ್ರೆಸ್ ನಾಯಕನ ಅಸಂಬದ್ಧ ಆರೋಪಗಳು ಲೋಕಸಭೆ ಚುನಾವಣೆಯ ಸೋಲಿನ ನಿರಾಶೆಯಿಂದ ಅವರು ಚೇತರಿಸಿಕೊಂಡಿಲ್ಲ ಎಂಬುದನ್ನು ತೋರಿಸುತ್ತದೆ. ಮೋದಿ ಸರ್ಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಬರಲಿದೆ ಎಂಬ ಆತಂಕದಲ್ಲಿ ರಾಹುಲ್ ಗಾಂಧಿ ತೋರುತ್ತಿದ್ದಾರೆ, ಅದಕ್ಕಾಗಿಯೇ ಅವರು ತಮ್ಮ ಹೇಳಿಕೆಗಳ ಮೂಲಕ ವಿದೇಶಿ ಮತ್ತು ಸ್ವದೇಶಿ ಹೂಡಿಕೆದಾರರನ್ನು ಗೊಂದಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ.
ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರು ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾರುಕಟ್ಟೆಗಳಲ್ಲಿನ ಹಿನ್ನಡೆಯ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸಿದರು ಮತ್ತು ಇದನ್ನು ‘ದೊಡ್ಡ ಷೇರು ಮಾರುಕಟ್ಟೆ ಹಗರಣ’ ಎಂದು ಬಣ್ಣಿಸಿದರು. ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ಮೋದಿ ಸರ್ಕಾರದ ಮೂರನೇ ಅವಧಿಯಲ್ಲಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಹೇಳಿದರು.
“ಕಳೆದ 10 ವರ್ಷಗಳಲ್ಲಿ, ನಮ್ಮ ಮಾರುಕಟ್ಟೆ ಮೌಲ್ಯವು ಮೊದಲ ಬಾರಿಗೆ 5 ಟ್ರಿಲಿಯನ್ ದಾಟಿದೆ. ಹತ್ತು ವರ್ಷಗಳ ಹಿಂದೆ, ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತದಲ್ಲಿ, ದೇಶದ ಮಾರುಕಟ್ಟೆ ಮೌಲ್ಯವು ಕೇವಲ 67 ಲಕ್ಷ ಕೋಟಿ ಆಗಿತ್ತು. ಮೋದಿ ಸರ್ಕಾರವು ಅದನ್ನು 415 ಲಕ್ಷ ಕೋಟಿ ರೂ. 2014-2024ರ ಅವಧಿ,” ಪಿಯೂಷ್ ಗೋಯಲ್ ಹೇಳಿದರು.