ಹೊಸದಿಲ್ಲಿ: ‘ಮೋದಿ ಉಪನಾಮ’ ಟೀಕೆ ಪ್ರಕರಣದಲ್ಲಿ ತನಗೆ ಸೂರತ್ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಪಡಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆಯನ್ನು ತಡೆಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕೈಗೆತ್ತಿಕೊಂಡಿದೆ.
ಅರ್ಜಿ ವಿಚಾರಣೆ ಪ್ರಾರಂಭಿಸಿದ ಸರ್ವೋಚ್ಛ ನ್ಯಾಯಾಲಯವು ಗುಜರಾತ್ ಸರ್ಕಾರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.
ರಾಹುಲ್ ಗಾಂಧಿಯವರ ಮನವಿಯ ಮೇರೆಗೆ ದೂರುದಾರ ಮತ್ತು ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್ 4 ಕ್ಕೆ ಮುಂದೂಡಿದೆ.
ಇದನ್ನೂ ಓದಿ:Manipur: ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆಗೆ ಕಾರಣವಾಗಿದ್ದು ಒಂದು ಸುಳ್ಳು ಸುದ್ದಿ!
2019ರ ಏಪ್ರಿಲ್ 13 ರಂದು ಕರ್ನಾಟಕದ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತಾ ರಾಹುಲ್, “ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವಾಗಿ ಹೇಗೆ ಹೊಂದಿದ್ದಾರೆ?” ಎಂಬ ಹೇಳಿದ್ದರು. ಈ ಹೇಳಿಕೆಯ ವಿರುದ್ಧ 2019 ರಲ್ಲಿ, ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಸೂರತ್ ನಲ್ಲಿ ಕೇಸು ದಾಖಲು ಮಾಡಿದ್ದರು.