Advertisement

ರಾಹುಲ್‌ ರಾಜ್ಯದಿಂದ ಸ್ಪರ್ಧೆ ಇಲ್ಲ: ಸಿದ್ದು

07:35 AM Dec 24, 2018 | Team Udayavani |

ಬೆಳಗಾವಿ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ. ಅವರು ಉತ್ತರ ಪ್ರದೇಶದ ಅಮೇಠಿಯಿಂದಲೇ ಸ್ಪರ್ಧಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರವಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಈಗಾಗಲೇ ಎಲ್ಲ ಕಡೆಯೂ ತಯಾರಿ ನಡೆದಿದ್ದು ತಳಮಟ್ಟದಿಂದ ಪಕ್ಷವನ್ನು ಸಂಘಟನೆ ಮಾಡುವಲ್ಲಿ ಮುಖಂಡರು ಶ್ರಮಿಸುತ್ತಿದ್ದಾರೆ ಎಂದರು.

Advertisement

ಯಡಿಯೂರಪ್ಪ ಅವರಿಗೆ ಸತ್ಯ ಹೇಳಿಯೇ ಗೊತ್ತಿಲ್ಲ. ಯಾವಾಗಲೂ ಏನೇನೋ ಸುಳ್ಳು ಹೇಳುತ್ತಾರೆ. ಹೀಗಾಗಿ ಅವರ ಮಾತಿಗೆ ನಾನು ಮೂರು ಕಾಸಿನ ಕಿಮ್ಮತ್ತೂ ಕೊಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು. ಯಡಿಯೂರಪ್ಪ ಮುಖ್ಯಮಂತ್ರಿ ಆಗುವ ಆಸೆ ಇಟ್ಟುಕೊಂಡಿರುವುದು ತಪ್ಪಲ್ಲ. ಆದರೆ ಜನಾದೇಶ ಅವರಿಗೆ ಸಿಕ್ಕಿಲ್ಲ. ಹೇಗಾದರೂ ಮಾಡಿ ಮುಖ್ಯಮಂತ್ರಿ ಆಗಬೇಕೆಂದು ಪ್ರಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.

ಚುನಾವಣೆ ಬಳಿಕ ಪುನಾರಚನೆ
ಸಮ್ಮಿಶ್ರ ಸರಕಾರದ ಸಂಪುಟ ವಿಸ್ತರಣೆ ಮತ್ತು ಕೆಲವರನ್ನು ಕೈಬಿಟ್ಟು ಹೊಸಬರನ್ನು ಸಂಪುಟಕ್ಕೆ ಸೇರಿಸಿಕೊಂಡ ವಿಷಯದಲ್ಲಿ ಕಾಂಗ್ರೆಸ್‌ನ ಯಾವ ಶಾಸಕರಲ್ಲೂ ಅಸಮಾಧಾನವಿಲ್ಲ. ರಾಜ್ಯದಲ್ಲಿ ಲೋಕಸಭೆ ಚುನಾವಣೆ ಬಳಿಕ ಸಂಪುಟವನ್ನು ಪುನಾರಚನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ರಮೇಶ್‌ ಜಾರಕಿಹೋಳಿ ರಾಜೀನಾಮೆ ಕೊಡುತ್ತಾರೆ ಎಂಬ ವದಂತಿ ಸುಳ್ಳು. ತಮಗೆ ಸಚಿವ ಸ್ಥಾನ ತಪ್ಪಲು ನಾಲ್ವರು ಕಾರಣರಾಗಿದ್ದಾರೆ ಎಂದು ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ. ಆದರೆ ಇದರಲ್ಲಿ  ಯಾರ ಕೈವಾಡವೂ ಇಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next