ಮಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್‌ನ ವರ್ಚಸ್ಸು ವೃದ್ಧಿಗೊಂಡಿರುವುದನ್ನು ಸಹಿಸದ ಬಿಜೆಪಿ ಸೋಲುವ ಭೀತಿಯಿಂದ ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಕಿರುಕುಳ ನೀಡುತ್ತಿದೆ ಎಂದು ಮಂಗಳೂರು ಶಾಸಕ ಯು.ಟಿ. ಖಾದರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸರಕಾರ ವಿಳಂಬ ಮಾಡುತ್ತಿದೆ. ಆಕೆ ದೇಶದ ಕ್ಷಮೆ ಕೇಳಬೇಕು ಎಂದರು.
ಹೊಸಪಠ್ಯ ನೀಡಬೇಕು: ಪಠ್ಯ ಪುಸ್ತಕ ಪರಿಷ್ಕರಣ ಸಮಿತಿ ರಚಿಸಿರುವ ಪುಸ್ತಕಗಳಲ್ಲಿ ಬಸವಣ್ಣ, ಕುವೆಂಪು, ಅಂಬೇಡ್ಕರ್, ನಾರಾಯಣ ಗುರುಗಳ ಪಠ್ಯವನ್ನು ಕೈ ಬಿಟ್ಟಿರುವ ಕಾರಣ ಈ ಪುಸ್ತಕಗಳನ್ನು ತಿರಸ್ಕರಿಸಿ ತಜ್ಞರ ಸಮಿತಿ ಮೂಲಕ ವಿದ್ಯಾರ್ಥಿಗಳಿಗೆ ಹೊಸ ಪಠ್ಯ ನೀಡಬೇಕು ಎಂದು ಒತ್ತಾಯಿಸಿದರು.