Advertisement
ಮಂಗಳೂರಿನ ಸರ್ಕಿಟ್ ಹೌಸ್‌ನಲ್ಲಿ ಬುಧವಾರ ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆ, ಹಾಗೂ ಉಡುಪಿ ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಹಿರಿಯ ನಾಯಕರು, ಪಕ್ಷದಲ್ಲಿ ಪ್ರಮುಖ ಹೊಣೆಗಾರಿಕೆ ವಹಿಸಿಕೊಂಡಿರುವ ಪದಾಧಿಕಾರಿಗಳ ಜತೆ ಸಂವಾದ ನಡೆಸಿದ ಅವರು, ರಾಜ್ಯ ಸರಕಾರದ ಸಾಧನೆಗಳನ್ನು ಕಾರ್ಯಕರ್ತರು ಜನತೆಗೆ ಮನದಟ್ಟು ಮಾಡಬೇಕು ಹಾಗೂ ಕೇಂದ್ರ ಸರಕಾರದ ವೈಫಲ್ಯವನ್ನು ವಿವರಿಸಬೇಕು ಎಂದರು.
Related Articles
ದ.ಕ. ಮತ್ತು ಉಡುಪಿ ಜಿಲ್ಲೆಗಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ನಾಯಕರು ಹಾಗೂ ಕೆಪಿಸಿಸಿ ಕಾರ್ಯ ದರ್ಶಿಗಳ ಜಿಲ್ಲಾವಾರು ಪ್ರತ್ಯೇಕ ಸಭೆಯನ್ನು ರಾಹುಲ್ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್, ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಾ| ಎಂ. ವೀರಪ್ಪ ಮೊಯಿಲಿ, ಉಡುಪಿ ಜಿಲ್ಲೆಯ10 ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 16 ಬ್ಲಾಕ್‌ಗಳ ಅಧ್ಯಕ್ಷರು, ಸಚಿವರು, ಶಾಸಕರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಸದಸ್ಯರು, ಕೆಪಿಸಿಸಿ ಕಾರ್ಯದರ್ಶಿಗಳು, ಮಾಜಿ ಸಂಸದರು, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.
Advertisement
ಆರಂಭದಲ್ಲಿ ಉಡುಪಿ ಜಿಲ್ಲಾ ಸಭೆ ನಡೆಯಿತು. ಸಚಿವ ಪ್ರಮೋದ್ ಮಧ್ವರಾಜ್, ಶಾಸಕ ವಿನಯ ಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ಜಿಲ್ಲೆಯ ಪ್ರಮುಖ ನಾಯಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಭಾಗವಹಿಸಿದ್ದರು. ಅನಂತರ ಜರಗಿದ ದ.ಕ. ಜಿಲ್ಲಾ ಸಭೆಯಲ್ಲಿ ಸಚಿವರಾದ ಬಿ. ರಮಾನಾಥ ರೈ, ಯು.ಟಿ. ಖಾದರ್, ಶಾಸಕರಾದ ವಸಂತ ಬಂಗೇರ, ಅಭಯಚಂದ್ರ ಜೈನ್, ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ, ಮೊದಿನ್ ಬಾವಾ, ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ’ಸೋಜಾ, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಸಹಿತ ಪ್ರಮುಖ ನಾಯಕರು ಭಾಗವಹಿಸಿದ್ದರು.
ನಾಯಕರ ಸಂತಸಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕರು ರಾಹುಲ್ ಅವರ ಜನಾಶೀರ್ವಾದ ಯಾತ್ರೆಯ ಯಶಸ್ಸಿನದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಸಚಿವ ರಮಾನಾಥ ರೈ ಮಾತನಾಡಿ, ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್‌ನ ಹಳೆಯ ಇತಿಹಾಸವನ್ನು ಮತ್ತೆ ಜ್ಞಾಪಿಸಿದೆ ಎಂದರು. ಸಚಿವ ಪ್ರಮೋದ್ ಮಧ್ವರಾಜ್ ಮಾತನಾಡಿ, ಜನಾಶೀರ್ವಾದ ಯಾತ್ರೆ ಅತ್ಯಂತ ಯಶಸ್ವಿಯಾಗಿ ನಡೆದಿದೆೆ. ಇಂದಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲೂ ರಾಹುಲ್ ಪಕ್ಷ ಸಂಘಟನೆ, ಚುನಾವಣಾ ಸಿದ್ಧತೆಗಳ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ ಎಂದು ಹೇಳಿದರು. ಆಹ್ವಾನ ಪಟ್ಟಿಯಲ್ಲಿ ಹೆಸರಿದ್ದವರಿಗೆ ಮಾತ್ರ ಪ್ರವೇಶ
ರಾಹುಲ್ ವಾಸ್ತವ್ಯ ಹೂಡಿದ್ದ ಸರ್ಕಿಟ್ ಹೌಸ್‌ಗೆ ಬುಧವಾರ ಬೆಳಗ್ಗಿನಿಂದಲೇ ಕಾಂಗ್ರೆಸ್ ಕಾರ್ಯಕರ್ತರು, ಸ್ಥಳೀಯ ನಾಯಕರು ಆಗಮಿಸುತ್ತಿದ್ದರು. ಆದರೆ ಪ್ರವೇಶದ್ವಾರದಲ್ಲಿ ಎಸ್‌ಪಿಜಿಯವರು ರಾಹುಲ್ ಗಾಂಧಿಯವರ ನಿಯೋಜಿತ ಸಭೆಗೆ ಹಾಜರಾಗಲು ಪಾಸ್ ನೀಡಿದವರಿಗೆ ಮಾತ್ರ ಒಳಪ್ರವೇಶಿಸಿಲು ಅವಕಾಶ ನೀಡುತ್ತಿದ್ದರು. ಡಾ| ಜಿ. ಪರಮೇಶ್ವರ್, ಸಚಿವ ಯು.ಟಿ. ಖಾದರ್ ಸೇರಿದಂತೆ ಸಚಿವರು, ಶಾಸಕರೂ ಕೂಡ ಭದ್ರತೆಯ ಬಿಸಿ ಎದುರಿಸಬೇಕಾಯಿತು. ಅನೇಕ ಸ್ಥಳೀಯ ನಾಯಕರು ಒಳಪ್ರವೇಶಿಸಲು ಪ್ರಯತ್ನಿಸಿದರೂ ಎಸ್‌ಪಿಜಿಯವರು ಅವಕಾಶ ನೀಡಲಿಲ್ಲ. ಇದರಿಂದ ಎಸ್‌ಪಿಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಕಂಡುಬಂತು. ಶೃಂಗೇರಿಗೆ ಪಯಣ
ರಾಹುಲ್ ಬುಧವಾರ ಬೆಳಗ್ಗೆ 10.50ರ ವೇಳೆಗೆ ಸಕೀìಟ್ ಹೌಸ್‌ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ನಿರ್ಗಮಿಸಿದರು. ಹಾದಿ ಮಧ್ಯದಲ್ಲಿ ಸರಕಾರಿ ಪಾಲಿಟೆಕ್ನಿಕ್ ಸಮೀಪವಿರುವ ಅಂಗನವಾಡಿಗೆ ಭೇಟಿ ನೀಡಿ ಕೆಲವು ನಿಮಿಷ ಮಕ್ಕಳೊಂದಿಗೆ ಕಳೆದರು. ಬಳಿಕ ವಿಮಾನ ನಿಲ್ದಾಣದಿಂದ 11.20ಕ್ಕೆ ಹೆಲಿಕಾಪ್ಟರ್ ಮೂಲಕ ಶೃಂಗೇರಿಗೆ ನಿರ್ಗಮಿಸಿದರು. ಅವರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್ ಪಯಣಿಸಿದರು. ಇನ್ನೊಂದು ಹೆಲಿಕಾಪ್ಟರ್‌ನಲ್ಲಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಾ| ಎಂ. ವೀರಪ್ಪ ಮೊಯಿಲಿ ಪಯಣಿಸಿದರು.