Advertisement

Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

12:46 PM Mar 23, 2023 | Team Udayavani |

ಗುಜರಾತ್(ಸೂರತ್): “ಮೋದಿ” ಉಪನಾಮಕ್ಕೆ ಸಂಬಂಧಸಿದಂತೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯನ್ನು ದೋಷಿ ಎಂದು ಸೂರತ್ ಕೋರ್ಟ್ ಗುರುವಾರ (ಮಾರ್ಚ್ 23) ತೀರ್ಪು ನೀಡಿ, ಎರಡು ವರ್ಷಗಳ ಶಿಕ್ಷೆ ವಿಧಿಸಿದೆ.

Advertisement

ಇದನ್ನೂ ಓದಿ:ಆನ್ಲೈನ್‌ ನಲ್ಲಿ ವಿದ್ಯುತ್‌ ಬಿಲ್‌ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

2019ರಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ರಾಜಕೀಯ ಸಭೆಯಲ್ಲಿ ರಾಹುಲ್ ಗಾಂಧಿ “ಮೋದಿ ಉಪನಾಮ”ದ ಕುರಿತು ನೀಡಿದ್ದ ಹೇಳಿಕೆ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ದೋಷಿಯಾಗಿದ್ದು, ಎರಡು ವರ್ಷಗಳ ಶಿಕ್ಷೆ ಪ್ರಕಟಿಸಿದೆ. ಏತನ್ಮಧ್ಯೆ ಜಾಮೀನು ನೀಡಿರುವ ಕೋರ್ಟ್, ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತ್ತಿನಲ್ಲಿಟ್ಟಿದ್ದು, ಈ ಶಿಕ್ಷೆ ಕುರಿತು ರಾಹುಲ್ ಮೇಲ್ಮನವಿ ಸಲ್ಲಿಸಬೇಕಾಗಿದೆ.

“ಎಲ್ಲಾ ಕಳ್ಳರು ಸಾಮಾನ್ಯವಾಗಿ ಮೋದಿ ಎಂಬ ಸರ್ ನೇಮ್ ಹೊಂದಿದ್ದು ಹೇಗೆ? ಎಂದು ರಾಹುಲ್ ಗಾಂಧಿ ಚುನಾವಣಾ Rallyಯಲ್ಲಿ ಪ್ರಶ್ನಿಸಿದ್ದರು. ಈ ಹೇಳಿಕೆ ವಿರುದ್ಧ ಗುಜರಾತ್ ಬಿಜೆಪಿ ಶಾಸಕ, ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ತಲೆಮರೆಸಿಕೊಂಡಿರುವ ಉದ್ಯಮಿಗಳಾದ ನೀರವ್ ಮೋದಿ ಮತ್ತು ಲಲಿತ್ ಮೋದಿಯನ್ನು ಉದ್ದೇಶಿಸಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು. ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಇಂದು ಬೆಳಗ್ಗೆ ಗುಜರಾತ್ ಗೆ ಆಗಮಿಸಿದ್ದರು ಎಂದು ವರದಿ ತಿಳಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next