ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲೋಕಸಭೆ ಸದಸ್ಯತ್ವ ಮರುಸ್ಥಾಪಿಸಿದ ಒಂದು ದಿನದ ನಂತರ ಮಂಗಳವಾರ (ಆಗಸ್ಟ್ 8) ಅವರ ಹಳೆಯ ಸರ್ಕಾರಿ ಬಂಗಲೆಯನ್ನು ಮಂಜೂರು ಮಾಡಲಾಗಿದೆ. ಲೋಕಸಭೆಯ ಸದನ ಸಮಿತಿ ರಾಹುಲ್ ಗಾಂಧಿ ಅವರಿಗೆ ಸರ್ಕಾರಿ ಬಂಗಲೆ ಮಂಜೂರು ಮಾಡಿದೆ.
2019 ರ “ಮೋದಿ ಉಪನಾಮ” ವಿಚಾರಕ್ಕೆ ಸಂಬಂಧಿಸಿ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಒಳಪಟ್ಟ ಅವರು ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಅವರು ಈ ವರ್ಷದ ಏಪ್ರಿಲ್‌ನಲ್ಲಿ ಬಂಗಲೆಯನ್ನು ಖಾಲಿ ಮಾಡಿದ್ದರು.
ಮಾರ್ಚ್ 24 ರಂದು ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು. ಗುಜರಾತ್‌ನ ಸೂರತ್‌ನಲ್ಲಿರುವ ಮೆಟ್ರೋಪಾಲಿಟನ್ ನ್ಯಾಯಾಲಯವು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ವಾಸ್ತವವಾಗಿ, ಜುಲೈ 7 ರಂದು, ಗುಜರಾತ್ ಹೈಕೋರ್ಟ್ ಶಿಕ್ಷೆಯನ್ನು ತಡೆಹಿಡಿಯುವ ಅವರ ಮನವಿಯನ್ನು ತಿರಸ್ಕರಿಸಿತು, ನಂತರ ಅವರು ಜುಲೈ 15 ರಂದು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದರು. ಆಗಸ್ಟ್ 4ರಂದು ಸುಪ್ರೀಂ ಕೋರ್ಟ್ ರಾಹುಲ್ ಶಿಕ್ಷೆಗೆ ತಡೆ ನೀಡಿತ್ತು.
ಮೋದಿ ಉಪನಾಮ ಮಾನನಷ್ಟ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ರಿಲೀಫ್ ಪಡೆದ ನಂತರ ಲೋಕಸಭೆಯ ಸೆಕ್ರೆಟರಿಯೇಟ್ ಕಾಂಗ್ರೆಸ್‌ನ ರಾಹುಲ್ ಗಾಂಧಿಯನ್ನು ವಯನಾಡ್ ಸಂಸದರಾಗಿ ಮರುಸ್ಥಾಪಿಸಿದೆ.
ಇದನ್ನೂ ಓದಿ : Contractors Issue; ಬ್ಲ್ಯಾಕ್ ಮೇಲ್ ಗಳಿಗೆಲ್ಲ ನಾನು ಹೆದರಲ್ಲ…: ಡಿಸಿಎಂ ಡಿ.ಕೆ.ಶಿವಕುಮಾರ್