ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣಕಾಸು ಅಕ್ರಮಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಹೊಸತಾಗಿ ಸಮನ್ಸ್ ಜಾರಿ ಮಾಡಿದೆ.
ಜತೆಗೆ ಅವರನ್ನು ಜೂ. 13ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ವಯನಾಡ್ ಸಂಸದರಾಗಿರುವ ರಾಹುಲ್ ಗಾಂಧಿಯವರು ಸದ್ಯ ವಿದೇಶ ಪ್ರವಾಸದಲ್ಲಿ ಇರುವುದರಿಂದ ವಿಚಾರಣೆ ದಿನ ಬದಲಿಸುವಂತೆ ಕೇಂದ್ರ ತನಿಖಾ ಸಂಸ್ಥೆಗೆ ಮನವಿ ಮಾಡಿಕೊಂಡಿದ್ದರು.
ಇದನ್ನೂ ಓದಿ:ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿಶೀಟರ್ ಚೇತನ್ ಬಂಧನ
ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಜೂ.8ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಸೂಚನೆ ನೀಡಿದೆ.
ಆದರೆ, ಅವರಿಗೆ ಬುಧವಾರ ಕೊರೊನಾ ದೃಢಪಟ್ಟಿರುವುದರಿಂದ ಕ್ವಾರಂಟೈನ್‌ನಲ್ಲಿ ಇದ್ದಾರೆ.