Advertisement

ಬಹಳ ಧೈರ್ಯದಿಂದ ರಾಹುಲ್ ಗಾಂಧಿ ರಾಜ್ಯಕ್ಕೆ ಬಂದಿದ್ದಾರೆ :ಕಾಲೆಳೆದ ಅರುಣ್ ಸಿಂಗ್

07:27 PM Mar 31, 2022 | Team Udayavani |

ಬೆಂಗಳೂರು: ನಾಲ್ಕು ರಾಜ್ಯಗಳಲ್ಲಿ ಬಿಜೆಪಿಗೆ ಪ್ರಚಂಡ ಜಯ ಸಿಕ್ಕಿದೆ. ಇದೊಂದು ಐತಿಹಾಸಿಕ ಗೆಲುವಾಗಿದ್ದು, ಕರ್ನಾಟಕದ ಕಾರ್ಯಕರ್ತರಿಗೆ ಈ‌ ಗೆಲುವು ಹುಮ್ಮಸ್ಸು ಮೂಡಿಸಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

Advertisement

ಕೆ ಕೆ ಗೆಸ್ಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವುದಿಲ್ಲ. ಅವಧಿ ಮುಗಿದ ಬಳಿಕವೇ ಚುನಾವಣೆ ನಡೆಯಲಿದೆ ಎಂದರು.

ರಾಹುಲ್ ಗಾಂಧಿ ರಾಜ್ಯ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ, ದೇಶಾದ್ಯಂತ ಕಾಂಗ್ರೆಸ್ ಸೋಲುತ್ತಿದೆ. ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲು. ಈ ಬಾರಿ ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಸೋಲು ಕಟ್ಟಿಟ್ಟ ಬುತ್ತಿ. ಸೋಲಾಗುತ್ತದೆ ಅಂತ ಗೊತ್ತಿದ್ದರೂ ರಾಹುಲ್ ಗಾಂಧಿ ಇಲ್ಲಿಗೆ ಬರುವ ಧೈರ್ಯ ತೋರಿಸಿರುವುದು ಮೆಚ್ಚಬೇಕಾದದ್ದೇ, ಬಹಳ ಧೈರ್ಯದಿಂದ ರಾಹುಲ್ ಗಾಂಧಿ ಇಲ್ಲಿಗೆ ಬಂದಿದ್ದಾರೆ. ಅವರು ಬಂದು ರ್ಯಕ್ರಮಗಳಲ್ಲಿ ಭಾಗವಹಿಸಲಿ. ಆದರೆ ಅವರ ನೇತೃತ್ವದಲ್ಲಿ ಯಾವುದೂ ನೆಟ್ಟಗೆ ನಡೆಯುತ್ತಿಲ್ಲ.ಅವರಿಂದ ಹೊಸದೇನೂ ಮಾಡುವುದಕ್ಕೆ ಆಗುತ್ತಿಲ್ಲ ಎಂದು ಕಾಲೆಳೆದರು.

ಸಂಪುಟ ಸರ್ಜರಿ ಬಗ್ಗೆ ದ್ವಂದ್ವ

ಸಂಪುಟ ಸರ್ಜರಿ ಬಗ್ಗೆ ಯಾವುದೇ ಬದಲಾವಣೆ ಇಲ್ಲ ಅಂತ ಒಂದು ಕಡೆ ಹೇಳಿದರೆ ಮತ್ತೊಂದು ಕಡೆ ಸಂಪುಟ ಪುನಾರಚನೆ ಸಿಎಂ ವಿವೇಚನೆಗೆ ಬಿಟ್ಟ ವಿಚಾರ ಎಂದರು.

Advertisement

ರಾಜ್ಯದಲ್ಲಿ ಬಿಜೆಪಿ ನಾಯಕರು ಲೋಕಪ್ರಿಯರಿದ್ದಾರೆ, ಜನಪ್ರಿಯರಿದ್ದಾರೆ. ಬೊಮ್ಮಾಯಿಯವರು ತಮ್ಮ ಆಡಳಿತ ವೈಖರಿಯಿಂದ ಹೆಸರು ಮಾಡಿದ್ದಾರೆ. ಈ‌ ಆಧಾರದಲ್ಲೇ ಚುನಾವಣೆ ಎದುರಿಸುತ್ತೇವೆ, ಗೆಲ್ಲುತ್ತೇವೆ. ಎಲ್ಲ ಕಡೆ ಸೋಲುತ್ತಿರುವ ಕಾಂಗ್ರೆಸ್ ಇಲ್ಲಿ‌ ಅಧಿಕಾರಕ್ಕೆ ಬರುವುದಿಲ್ಲ ಎಂದರು.

ಯಾವುದೇ ಬದಲಾವಣೆ ಮಾಡುವುದಿಲ್ಲ, ಈಗ ಪಕ್ಷ ಹೇಗಿದೆಯೋ ಅದೇ ಸ್ಥಿತಿಯಲ್ಲಿ ಚುನಾವಣೆ ಎದುರಿಸುತ್ತೇವೆ. ಬಿಜೆಪಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದರು.

ಸಂಪುಟ ಸೇರಲು ತುಂಬಾ‌ ಜನ ಆಕಾಂಕ್ಷಿಗಳು ಕಾಯುತ್ತಿದ್ದಾರೆ ಎಂಬ ಪ್ರಶ್ನೆಗೆ, ಸಂಪುಟಕ್ಕೆ ಸೇರಿಸುವುದು ಬಿಡುವುದು ಸಿಎಂ ವಿವೇಚನೆಗೆ ಸೇರಿದ ವಿಚಾರ ಎಂದರು.

ರಾಜ್ಯದಲ್ಲಿ ಕೋಮು ಸಾಮರಸ್ಯ ಕದಡುವ ವಿದ್ಯಮಾನಗಳು ನಡೆಯುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾವು ಅಭಿವೃದ್ಧಿ ಕೆಲಸಗಳನ್ನು ಇಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ಕಾಂಗ್ರೆಸ್ ನಮ್ಮ ಮೇಲೆ ವೃಥಾ ಆರೋಪ‌ ಮಾಡುತ್ತಿದೆ. ಜನರಲ್ಲಿ ಗೊಂದಲ ಮೂಡಿಸುವ ಕೆಲಸ ಮಾಡುತ್ತಿದೆ. ನಮ್ಮ ಗಮನ ಅಭಿವೃದ್ಧಿ ಮೇಲೆ ಮಾತ್ರ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next