Advertisement
ಚುನಾವಣೆಯಲ್ಲಿ ತಮ್ಮ ಸಾಂಪ್ರದಾಯಿಕ ಕ್ಷೇತ್ರ ಅಮೇಠಿಯಂದ ಸ್ಪರ್ಧಿಸಿದ್ದ ರಾಹುಲ್, ಕೇಂದ್ರ ಸಚಿವೆ ಸ್ಮತಿ ಇರಾನಿ ವಿರುದ್ಧ 52,000 ಮತಗಳ ಅಂತರದಿಂದ ಸೋತಿದ್ದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್ ಫಾಲೋವರ್‌ಗಳ ಸಂಖ್ಯೆ ಬುಧವಾರ 1 ಕೋಟಿ ದಾಟಿದೆ. ಈ ಮೈಲುಗಲ್ಲು ತಲುಪಿದ ಹಿನ್ನೆಲೆಯಲ್ಲಿ ತಮ್ಮ ಎಲ್ಲಾ ಫಾಲೋವರ್‌ಗಳಿಗೂ ರಾಹುಲ್ ಧನ್ಯವಾದ ಅರ್ಪಿಸಿದ್ದಾರೆ. “1 ಕೋಟಿ ಫಾಲೋವರ್‌ಗಳು, ನಿಮ್ಮೆಲ್ಲರಿಗೂ ಧನ್ಯವಾದಗಳು. ನಾನು ಈ ಸಂಭ್ರಮವನ್ನು ಅಮೇಠಿಯ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಆಚರಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ. ಕಳೆದ ವರ್ಷ ಶಶಿ ತರೂರ್ ಕಾಂಗ್ರೆಸ್‌ನಲ್ಲಿ ಅತಿ ಹೆಚ್ಚು ಟ್ವಿಟರ್ ಫಾಲೋವರ್‌ಗಳನ್ನು ಹೊಂದಿರುವ ನಾಯಕ ಎಂದು ಕರೆಸಿಕೊಂಡಿದ್ದರು. ರಾಹುಲ್ ಗಾಂಧಿ ಈಗ ಅವರನ್ನು ಹಿಂದಿಕ್ಕಿದ್ದಾರೆ. ಪ್ರಧಾನಿ ಮೋದಿ 4.80 ಕೋಟಿ ಫಾಲೋವರ್‌ಗಳನ್ನು ಹೊಂದುವ ಮೂಲಕ, ದೇಶದಲ್ಲಿ ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ನಾಯಕ ಎಂಬ ಪಟ್ಟವನ್ನು ಕಾಯ್ದುಕೊಂಡಿದ್ದಾರೆ.