Advertisement

ರಾಹುಲ್ ಭಾರತ್ ಜೋಡೋ ಮೂಲಕ ಜನರಲ್ಲಿ ಸಾಮರಸ್ಯದ ಸಂದೇಶ: ಹೆಚ್ ಡಿಡಿ ಶ್ಲಾಘನೆ

04:46 PM Jan 24, 2023 | Team Udayavani |

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಭಾರತ್ ಜೋಡೋ ಯಾತ್ರೆ’ಗೆ ಮಂಗಳವಾರ ಶುಭಾಶಯಗಳನ್ನು ತಿಳಿಸಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ”ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ಹೋರಾಡುವ ಮೂಲಕ ಜನರಲ್ಲಿ ಸಾಮರಸ್ಯದ ಸಂದೇಶವನ್ನು ಹರಡುತ್ತಿದ್ದಾರೆ” ಎಂದು ಶ್ಲಾಘಿಸಿದ್ದಾರೆ.

Advertisement

ಜನವರಿ 30 ರಂದು ಶ್ರೀನಗರದಲ್ಲಿ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಜೆಡಿಎಸ್ ವರಿಷ್ಠ ದೇವೇಗೌಡ ಅವರು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಶ್ರೀನಗರದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಲವು ಸಮಾನ ಮನಸ್ಕ ಪಕ್ಷಗಳ ಮುಖಂಡರನ್ನು ಆಹ್ವಾನಿಸಿದ್ದಾರೆ.

ಆಹ್ವಾನಕ್ಕೆ ಧನ್ಯವಾದ ಅರ್ಪಿಸಿ ಖರ್ಗೆ ಅವರಿಗೆ ಪತ್ರ ಬರೆದಿರುವ ಗೌಡರು, ”ರಾಷ್ಟ್ರಪಿತ ಮಹಾತ್ಮ ಗಾಂಧಿ ಹುತಾತ್ಮರಾದ ದಿನದಂದು ಈ ಕಾರ್ಯಕ್ರಮ ಆಯೋಜಿಸುತ್ತಿರುವುದು ಸೂಕ್ತ. ಕಾರ್ಯಕ್ರಮಕ್ಕೆ ಖುದ್ದು ಹಾಜರಾಗಲು ನನಗೆ ಸಾಧ್ಯವಾಗದೇ ಇರಬಹುದು.ಆದರೆ ನನ್ನ ಶುಭ ಹಾರೈಕೆಗಳು ರಾಹುಲ್ ಗಾಂಧಿಯವರಿಗಿದೆ. ಅವರು ದ್ವೇಷ ಮತ್ತು ಹಿಂಸಾಚಾರದ ವಿರುದ್ಧ ಹೋರಾಡುತ್ತಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3,500 ಕಿಮೀ ನಡೆದು ಜನರಲ್ಲಿ ಸಾಮರಸ್ಯದ ಸಂದೇಶವನ್ನು ಹರಡಿದ್ದಾರೆ. ದಯವಿಟ್ಟು ಅವರಿಗೆ ನನ್ನ ಆಳವಾದ ಮೆಚ್ಚುಗೆಯನ್ನು ತಿಳಿಸಿ,” ಎಂದು 89 ವರ್ಷದ ಹಿರಿಯ ನಾಯಕ ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆಗೆ ಕೆಲವೇ ದಿನಗಳಿರುವ ಮುನ್ನ ಶುಭ ಹಾರೈಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next