ಹೊಸದಿಲ್ಲಿ: ಪಕ್ಷ ಬಯಸಿದ ಯಾವುದೇ ಜವಾಬ್ದಾರಿ ಹೊರಲು ನಾನು ಸಿದ್ಧ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಭಿನ್ನಮತೀಯರ ಸಭೆಯಲ್ಲಿ ರಾಹುಲ್ ಗಾಂಧಿ ಈ ಜವಾಬ್ದಾರಿ ವಹಿಸಿಕೊಳ್ಳುವ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗಿದೆ. ಸೋನಿಯಾ ಗಾಂಧಿಯವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸಮ್ಮುಖದಲ್ಲಿ ರೆಬೆಲ್ ಗಳ ಸಭೆ ನಡೆಯಿತು.
ನಿಮ್ಮೆಲ್ಲರ ಅಪೇಕ್ಷೆಯಂತೆ ನಾನು ಪಕ್ಷಕ್ಕಾಗಿ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದು ರಾಹುಲ್ ಗಾಂಧಿ ಹೇಳಿದರು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಪವನ್ ಬನ್ಸಾಲ್ ಸಭೆಯ ನಂತರ ಹೇಳಿದರು. ಪಕ್ಷದೊಳಗೆ ಉತ್ತಮ ಸಂವಹನದ ಅಗತ್ಯವಿದೆ ಮತ್ತು ಪಕ್ಷವು ಬೂತ್ ಮಟ್ಟದಲ್ಲಿ ತನ್ನನ್ನು ಬಲಪಡಿಸುವ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಜಮ್ಮು-ಕಾಶ್ಮೀರ ಕ್ರಿಕೆಟ್ ಅಕ್ರಮ: ಫಾರೂಕ್ ಅಬ್ದುಲ್ಲಾಗೆ ಸೇರಿದ 11.86 ಕೋ.ರೂ. ಆಸ್ತಿ ವಶ
ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಬನ್ಸಾಲ್, ರಾಹುಲ್ ಗಾಂಧಿ ಬಗ್ಗೆ ಯಾರಿಗೂ ಭಿನ್ನಾಭಿಪ್ರಾಯವಿಲ್ಲ. ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದಿದ್ದಾರೆ.
ರಾಜ್ಯಗಳ “ಪ್ರಧಾನ ಕಾರ್ಯದರ್ಶಿ ವಿಧಾನ” ವನ್ನು ಬದಲಿಸಬೇಕು, ರಾಜ್ಯ ಕಾಂಗ್ರೆಸ್ ಮುಖ್ಯಸ್ಥರಿಗೆ ಅಧಿಕಾರ ನೀಡಬೇಕು ಮತ್ತು ಕಾಂಗ್ರೆಸ್ ತನ್ನ ಮತದಾರರನ್ನು ಉಳಿಸಿಕೊಳ್ಳಲು ಸಹಾಯ ಮಾಡಲು ಬೂತ್ ಮಟ್ಟದ ಸಮಿತಿಗಳನ್ನು ಬಲಪಡಿಸಬೇಕು ಎಂದು ಚಿದಂಬರಂ ಸೂಚನೆ ನೀಡಿದ್ದಾರೆ ಎಂದು ವರದಿಗಳು ತಿಳಸಿವೆ.