ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಸುಮಾರು ಒಂದು ವಾರದ ಯುರೋಪ್ ಪ್ರವಾಸಕ್ಕೆ ತೆರಳಿದ್ದು, ಈ ಸಂದರ್ಭದಲ್ಲಿ ಅವರು ಯುರೋಪಿಯನ್ ಯೂನಿಯನ್ (ಇಯು) ವಕೀಲರು, ವಿದ್ಯಾರ್ಥಿಗಳು ಮತ್ತು ಭಾರತೀಯ ವಲಸಿಗರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಸೆಪ್ಟೆಂಬರ್ 7 ರಂದು ಬ್ರಸೆಲ್ಸ್‌ನಲ್ಲಿ ವಕೀಲರನ್ನು ಭೇಟಿಯಾಗಲಿದ್ದಾರೆ ಜೊತೆಗೆ ಹೇಗ್‌ನಲ್ಲಿ ಕೂಡ ಸಭೆಯನ್ನು ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಸೆ. 8 ರಂದು ಪ್ಯಾರಿಸ್‌ನ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರಂತೆ ಇದಾದ ಬಳಿಕ ಅವರು ಸೆಪ್ಟೆಂಬರ್ 9 ರಂದು ಪ್ಯಾರಿಸ್‌ನಲ್ಲಿ ಫ್ರಾನ್ಸ್‌ನ ಲೇಬರ್ ಯೂನಿಯನ್‌ನ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಅವರು ನಾರ್ವೆಗೆ ಭೇಟಿ ನೀಡಲಿದ್ದಾರೆ, ಅಲ್ಲಿ ಅವರು ಸೆ. 10 ರಂದು ಓಸ್ಲೋದಲ್ಲಿ ಡಯಾಸ್ಪೊರಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರಂತೆ.
ದೆಹಲಿಯಲ್ಲಿ ನಡೆಯುವ G20 ಶೃಂಗಸಭೆ ಮುಗಿದ ಒಂದು ದಿನದ ಬಳಿಕ ದೆಹಲಿಗೆ ವಾಪಸ್ಸಾಗಲಿದ್ದಾರಂತೆ.
ಇದನ್ನೂ ಓದಿ: Udupi ಶ್ರೀಕೃಷ್ಣ ಜನ್ಮಾಷ್ಟಮಿ ಸಂದೇಶ : ಶ್ರೀಕೃಷ್ಣನ ಉಪದೇಶದಂತೆ ಸ್ವಾಸ್ಥ್ಯ-ಸಾಮರಸ್ಯ