Advertisement

ಕೇರಳದ ವಯನಾಡ್‌ನಿಂದಲೂ ರಾಹುಲ್‌ ಲೋಕಸಭಾ ಸ್ಪರ್ಧೆ ಸಂಭವ

11:08 AM Mar 23, 2019 | udayavani editorial |

ಹೊಸದಿಲ್ಲಿ : ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಕೇರಳದ ವಯನಾಡ್‌ ಕ್ಷೇತ್ರದಿಂದಲೂ ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಇಂದು ಶನಿವಾರ ವರದಿಗಳು ತಿಳಿಸಿವೆ.

Advertisement

ಎಐಸಿಸಿ ಪ್ರಧಾನಿ ಕಾರ್ಯದರ್ಶಿ ಊಮ್ಮನ್‌ ಚಾಂಡಿ, ವಿಪಕ್ಷ ನಾಯಕ ರಮೇಶ್‌ ಚೆನ್ನಿತ್ತಲ ಸೇರಿದಂತೆ ಕೇರಳದಲ್ಲಿನ ಉನ್ನತ ಕಾಂಗ್ರೆಸ್‌ ನಾಯಕರು ರಾಹುಲ್‌ ಗಾಂಧಿ ವಯನಾಡ್‌ ಕ್ಷೇತ್ರದಿಂದಲೂ ಸ್ಪರ್ಧಿಸಬೇಕೆಂಬ ಪ್ರಸ್ತಾವವನ್ನು ಮುಂದಿಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. 

ರಾಹುಲ್‌ ಅವರು ಈ ಪ್ರಸ್ತಾವವನ್ನು ಪರಿಶೀಲಿಸುತ್ತಿದ್ದು ಈ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ವರದಿಗಳು ತಿಳಿಸಿವೆ. 

ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ.  ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದಕ್ಷಿಣದ ರಾಜ್ಯಗಳಿಂದ ಸ್ಪರ್ಧಿಸಿದ್ದಾರಾದರೂ ಕೇರಳದಿಂದ ಈ ತನಕ ಸ್ಪರ್ಧಿಸಿಲ್ಲ. 

ಇಂದಿರಾ ಗಾಂಧಿ ಅವರು 1978ರಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದಲೂ ಸೋನಿಯಾ ಗಾಂಧಿ 1999ರಲ್ಲಿ ಬಳ್ಳಾರಿ ಕ್ಷೇತ್ರದಿಂದಲೂ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದರು.

Advertisement

ರಾಹುಲ್‌ ಗಾಂಧಿ ಅವರು ಈ ಮಾರ್ಚ್‌ ತಿಂಗಳ ಆದಿಯಲ್ಲಿ ಕೇರಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ನಾನು ಅವರಿಗೆ ವಯನಾಡ್‌ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುವಂತೆ ಕೇಳಿಕೊಂಡಿದ್ದೆ ಎಂದು ಚೆನ್ನಿತ್ತಲ ಅವರಿಂದು ಕೋಟ್ಟಯಂ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next