Advertisement

ರಾಹುಲ್‌ಗಾಂಧಿ ಭೇಟಿ ಮಾಡಿದ್ರಾ ದೇವೇಗೌಡ್ರು?

06:39 AM Jun 11, 2019 | Team Udayavani |

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಸೋಮವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಸೇರಿ ಹಲವು ಕಾಂಗ್ರೆಸ್‌ ನಾಯಕರ ಜತೆ ಚರ್ಚಿಸಿದರೆಂದು ಹೇಳಲಾಗಿದೆ.

Advertisement

ಲೋಕಸಭೆ ಚುನಾವಣೆ ಸೋಲಿನ ನಂತರ ಇದೇ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿದ್ದ ಅವರು, ರಾಜ್ಯದ ರಾಜಕೀಯ ವಿದ್ಯಮಾನಗಳು, ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚಿಸಿದರು. ರಾಜ್ಯದ ಕೆಲವು ಕಾಂಗ್ರೆಸ್‌ ನಾಯಕರ ಹೇಳಿಕೆ ಹಾಗೂ ವರ್ತನೆಗಳ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದರು ಎನ್ನಲಾಗಿದೆ.

ಭೇಟಿಯಾಗಿಲ್ಲ: ಆದರೆ, ಖಾಸಗಿ ಕೆಲಸದ ನಿಮಿತ್ತ ದೇವೇಗೌಡರು ದೆಹಲಿಗೆ ತೆರಳಿದ್ದರು. ರಾಹುಲ್‌ಗಾಂಧಿ ಸೇರಿ ಯಾರ ಜತೆಯೂ ಮಾತನಾಡಿಲ್ಲ ಎಂದು ಜೆಡಿಎಸ್‌ ವಕ್ತಾರ ರಮೇಶ್‌ಬಾಬು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next