Advertisement

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

09:35 AM Jul 05, 2024 | Team Udayavani |

ನವದೆಹಲಿ: ಉತ್ತರಪ್ರದೇಶದ ಹಾಥರಸ್‌ ಜಿಲ್ಲೆಯ ಫುಲ್ ರಾಯ್‌ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬವನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಭೇಟಿ ಮಾಡಲಿದ್ದಾರೆ.

Advertisement

ಉತ್ತರ ಪ್ರದೇಶದ ಹಾಥರಸ್‌ ನಲ್ಲಿ ನಡೆದ ಸತ್ಸಂಗದಲ್ಲಿ ನಡೆದ ಭಾರೀ ಕಾಲ್ತುಳಿತದಲ್ಲಿ 121 ಜನರು ಸಾವನ್ನಪ್ಪಿದ ಎರಡು ದಿನಗಳ ಬಳಿಕ ಯುಪಿ ಪೊಲೀಸರು ಬೋಧಕ ಭೋಲೆ ಬಾಬಾ ಅವರ ಸಂಘಟನಾ ಸಮಿತಿಯ ಆರು ಸದಸ್ಯರನ್ನು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಎಲ್ಲಾ ಆರು ಜನರು ಸತ್ಸಂಗದಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡಿದರು ಎಂದು ಹೇಳಲಾಗಿದೆ.

ಇದರ ನಡುವೆ ರಾಹುಲ್ ಗಾಂಧಿ ಇಂದು (ಶುಕ್ರವಾರ) ಹಾಥರಸ್‌ ಗೆ ಭೇಟಿ ನೀಡಲಿದ್ದು, ಅಲ್ಲಿ ಕಾಲ್ತುಳಿತದಿಂದ ಮೃತಪಟ್ಟಿರುವ ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಅಲಿಘಡಕ್ಕೆ ಬರಲಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಕಾಂಗ್ರೆಸ್ ನಾಯಕ ಅಜಯ್ ರಾಯ್ ಹಾಥರಸ್‌ ಸಂತ್ರಸ್ತರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ಇಂದು ಬೆಳಿಗ್ಗೆ 5:10 ರ ಸುಮಾರಿಗೆ ಉತ್ತರ ಪ್ರದೇಶಕ್ಕೆ ಪ್ರಯಾಣ ಬೆಳೆಸಿದ್ದು ಅವರ ಜೊತೆಗೆ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ, ಪಕ್ಷದ ವಕ್ತಾರೆ ಶ್ರೀನೆತ್ ಸೇರಿ ಹಲವು ಪದಾಧಿಕಾರಿಗಳು ಜೊತೆಗಿದ್ದಾರೆ ಎಂದು ಹೇಳಿದ್ದಾರೆ.

ಸತ್ಸಂಗ ಕಾರ್ಯಕ್ರಮದಲ್ಲಿ 80,000 ಮಂದಿಗೆ ಅನುಮತಿ ನೀಡಲಾಗಿತ್ತು ಆದರೆ ಮಿತಿ ಮೀರಿ 2.5 ಲಕ್ಷ ಜನರು ಸ್ಥಳದಲ್ಲಿ ಜಮಾಯಿಸಿದ್ದಾರೆ ಎಂದು ಹೇಳಲಾಗಿದೆ.

Advertisement

ಇದನ್ನೂ ಓದಿ: Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Advertisement

Udayavani is now on Telegram. Click here to join our channel and stay updated with the latest news.

Next