Advertisement

Lalu prasad yadav:ಲಾಲು ಪ್ರಸಾದ್ ಭೇಟಿಯಾಗಿ ಚರ್ಚೆ ನಡೆಸಿದ ರಾಹುಲ್ ಗಾಂಧಿ

11:38 AM Aug 05, 2023 | Team Udayavani |

ಹೊಸದಿಲ್ಲಿ: ಮಾನನಷ್ಟ ಪ್ರಕರಣದಲ್ಲಿ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ಬಳಿಕ ರಾಹುಲ್ ಗಾಂಧಿ ಅವರು ಮತ್ತೆ ಸಂಸದನಾಗಿ ಸಂಸತ್ ಪ್ರವೇಶಿಸಲು ಅರ್ಹತೆ ಪಡೆದಿದ್ದಾರೆ. ಇದೇ ಸಂದರ್ಭದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾ ದಳ ಪಕ್ಷದ ವರಿಷ್ಠ ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿಯಾದರು.

Advertisement

ಟ್ವಿಟರ್ ನಲ್ಲಿ ಎಐಸಿಸಿ ಈ ಇಬ್ಬರು ನಾಯಕರ ಚಿತ್ರಗಳನ್ನು ಪೋಸ್ಟ್ ಮಾಡಿದೆ. ಲಾಲು ಪ್ರಸಾದ್ ಅವರ ಪುತ್ರಿ, ಸಂಸದೆ ಮಿಸಾ ಭಾರ್ತಿ ಅವರ ನಿವಾಸದಲ್ಲಿ ಶುಕ್ರವಾರ ಭೇಟಿಯಾಗಿದ್ದಾರೆ.

ಈ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಎಸ್ ವೇಣುಗೋಪಾಲ್ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಉಪಸ್ಥಿತರಿದ್ದರು.

ಈ ಹಿಂದೆ ಪಾಟ್ನಾದಲ್ಲಿ ನಡೆದಿದ್ದ ವಿಪಕ್ಷಗಳ ಸಭೆಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರು ಲಘು ದಾಟಿಯಲ್ಲಿ ರಾಹುಲ್ ಗಾಂಧಿ ಅವರಿಗೆ ವಿವಾಹವಾಗಲು ಸೂಚಿಸಿದ್ದರು.

Advertisement

ವಿಪಕ್ಷಗಳ ನೂತನ ಮೈತ್ರಿಯಾದ ಇಂಡಿಯಾದಲ್ಲಿ ಕಾಂಗ್ರೆಸ್ ಮತ್ತು ಆರ್ ಜೆಡಿ ಭಾಗವಾಗಿದೆ. ಈತನ್ಮಧ್ಯೆ, ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್‌ ನಿಂದ ರಿಲೀಫ್ ಪಡೆದ ನಂತರ, ದೆಹಲಿಯ ಕಾಂಗ್ರೆಸ್‌ ನ ರಾಷ್ಟ್ರೀಯ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್, ಜನರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ಮತ್ತು “ಸತ್ಯಕ್ಕೆ ಯಾವಾಗಲೂ ಜಯವಿದೆ” ಎಂದು ಹೇಳಿದರು.

ಸತ್ಯ ಯಾವಾಗಲೂ ಗೆಲ್ಲುತ್ತದೆ. ಇವತ್ತಲ್ಲದಿದ್ದರೂ ಮುಂದೊಂದು ದಿನ ಸತ್ಯವೇ ಗೆಲುವು ಕಾಣುತ್ತದೆ. ನಾನು ಜನರಿಗೆ ಧನ್ಯವಾದ ಹೇಳಬಯಸುತ್ತೇನೆ ಎಂದು ರಾಹುಲ್ ಹೇಳಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next