ನವದೆಹಲಿ: ನಾಗಾಲ್ಯಾಂಡ್‌ನ ಮೋನ್ ಜಿಲ್ಲೆಯಲ್ಲಿ ಬಂಡುಕೋರರ ವಿರೋಧಿ ಕಾರ್ಯಾಚರಣೆಯಲ್ಲಿ ನಡೆದ ನಾಗರಿಕರ ಹತ್ಯೆಯ ಕುರಿತಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಕೇಂದ್ರ ಸರಕಾರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
‘
ಇದು ಹೃದಯ ವಿದ್ರಾವಕವಾಗಿದೆ.ನಮ್ಮ ದೇಶದಲ್ಲಿ ನಾಗರಿಕರಾಗಲಿ ಅಥವಾ ಭದ್ರತಾ ಸಿಬ್ಬಂದಿಗಳಾಗಲಿ ಸುರಕ್ಷಿತವಾಗಿಲ್ಲ.ಗೃಹ ಸಚಿವಾಲಯ ಏನು ಮಾಡುತ್ತಿದೆ ಎಂಬುದಕ್ಕೆ ಸರ್ಕಾರ “ನಿಜವಾದ ಉತ್ತರ” ನೀಡಬೇಕು’ ಎಂದು ಟ್ವೀಟ್ ಮಾಡಿದ್ದಾರೆ.
ಭದ್ರತಾ ಪಡೆಗಳಿಂದ ಕನಿಷ್ಠ 11 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು ಘಟನೆಯು “ತಪ್ಪಾದ ಗುರುತಿಸುವಿಕೆಯಿಂದ ” ನಡೆದಿದೆ, ತನಿಖೆ ನಡೆಸುತ್ತಿದ್ದೇವೆ ಎಂದು ನಾಗಾಲ್ಯಾಂಡ್‌ನ ರಾಜಧಾನಿ ಕೊಹಿಮಾದ ಪೊಲೀಸರು ಹೇಳಿದ್ದಾರೆ.
ಉನ್ನತ ಮಟ್ಟದ ಎಸ್‌ಐಟಿ ತಂಡ ಘಟನೆಯ ಕೂಲಂಕಷವಾಗಿ ತನಿಖೆ ನಡೆಸಿ, ದುಃಖತಪ್ತ ಕುಟುಂಬಗಳಿಗೆ ನ್ಯಾಯ ಒದಗಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.