Advertisement

Rajiv Gandhi Birth Anniversary: ತಂದೆಯ ಮಾತು ನೆನೆದು ಭಾವುಕರಾದ ರಾಹುಲ್

10:49 AM Aug 20, 2023 | Team Udayavani |

ಲಡಾಕ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಡಾಖ್‌ನ ಪಾಂಗಾಂಗ್ ಸರೋವರದ ದಡದಲ್ಲಿ ತಮ್ಮ ತಂದೆ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ 79 ನೇ ಜನ್ಮದಿನದ ಪ್ರಯುಕ್ತ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Advertisement

ರಾಹುಲ್ ಗಾಂಧಿ ಶನಿವಾರ ಲಡಾಖ್‌ನ ಪ್ಯಾಂಗಾಂಗ್ ಸರೋವರಕ್ಕೆ ಬೈಕ್‌ನಲ್ಲಿ ಪ್ರಯಾಣ ಬೆಳೆಸಿ. ಇಂದು ಬೆಳಗ್ಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಪ್ಯಾಂಗೊಂಗ್ ಸರೋವರದ ದಡದಲ್ಲಿ ಪ್ರಾರ್ಥನಾ ಸಭೆ ನಡೆಸಿದರು.

ತಂದೆಯನ್ನು ಸ್ಮರಿಸಿ ಟ್ವಿಟರ್ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ”ಅಪ್ಪಾ, ಭಾರತಕ್ಕಾಗಿ ನೀವು ಕಂಡ ಕನಸುಗಳು ಈ ಅಮೂಲ್ಯ ನೆನಪುಗಳಿಂದ ಉಕ್ಕಿ ಹರಿಯುತ್ತವೆ. ಪ್ರತಿಯೊಬ್ಬ ಭಾರತೀಯನ ಹೋರಾಟ ಮತ್ತು ಕನಸುಗಳನ್ನು ಅರ್ಥಮಾಡಿಕೊಳ್ಳುವ, ಭಾರತಮಾತೆಯ ಧ್ವನಿಯನ್ನು ಆಲಿಸುವ ನಿಮ್ಮ ಗುರುತುಗಳೇ ನನಗೆ ದಾರಿ ಎಂದು ಹೇಳಿದ್ದಾರೆ.

ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಪುಷ್ಪ ನಮನ:
ಭಾರತದ ಮಾಜಿ ಪ್ರಧಾನಿ, ದಿವಂಗತ ರಾಜೀವ್‌ ಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ದೆಹಲಿಯ ‘ವೀರ ಭೂಮಿ’ಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. ಇದೆ ವೇಳೆ ರಾಜೀವ್‌ ಪುತ್ರಿ ಪ್ರಿಯಾಂಕ ಗಾಂಧಿ, ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ನಾಯಕರು ಪುಷ್ಪ ನಮನ ಸಲ್ಲಿಸಿದರು.

 

Advertisement

Advertisement

Udayavani is now on Telegram. Click here to join our channel and stay updated with the latest news.

Next