Advertisement

Landslide ಇಂದು ವಯನಾಡ್‌ಗೆ ರಾಹುಲ್‌ ಗಾಂಧಿ, ಪ್ರಿಯಾಂಕಾ ಭೇಟಿ

11:53 PM Jul 31, 2024 | Team Udayavani |

ಹೊಸದಿಲ್ಲಿ: ಲೋಕಸಭೆ ವಿಪಕ್ಷ ನಾಯಕ ಹಾಗೂ ವಯನಾಡಿನ ಮಾಜಿ ಸಂಸದ ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗುರುವಾರ ವಯನಾಡ್‌ಗೆ ಭೇಟಿ ನೀಡಲಿದ್ದಾರೆ.

Advertisement

ಈ ಸಂದರ್ಭದಲ್ಲಿ ಭೂಕುಸಿತದಿಂದ ಸಂತ್ರಸ್ತರಾಗಿರುವವರನ್ನು ಭೇಟಿ ಮಾಡಲಿದ್ದಾರೆ. ರಾಹುಲ್‌ ಮತ್ತು ಪ್ರಿಯಾಂಕಾ ಅವರು ಮೇಪ್ಪಾಡಿಯ ಸರಕಾರಿ ಪ್ರೌಢ ಶಾಲೆ ಹಾಗೂ ಸಂತ ಜೋಸೇಫ್ ಶಾಲೆಯಲ್ಲಿ ಸ್ಥಾಪಿಸ ಲಾಗಿರುವ ಪರಿಹಾರ ಕೇಂದ್ರಗಳಿಗೆ ಮತ್ತು ಡಾ| ಮೂಪ್ಪನ್‌ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ಮಾಡಿ ಸಂತ್ರಸ್ತರಿಗೆ ಸಾಂತ್ವನ ಹೇಳಲಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ರಾಹುಲ್‌, ಕೇಂದ್ರ ಸರಕಾರ ನೆರವು ಒದಗಿಸಬೇಕೆಂದು ಕೋರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next