ಹೊಸದಿಲ್ಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ದ ದಾಳಿ ಮುಂದುವರಿದಿದ್ದು, ಒಂದು ರಾಷ್ಟ್ರ- ಒಂದು ಚುನಾವಣೆ ಆಲೋಚನೆಯು ಭಾರತೀಯ ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿ ಎಂದಿದ್ದಾರೆ.
ರಾಹುಲ್ ಗಾಂಧಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು” ಇದು ಭಾರತ, ರಾಜ್ಯಗಳ ಒಕ್ಕೂಟವಾಗಿದೆ. ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯು ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ” ಎಂದು ಬರೆದಿದ್ದಾರೆ.
ಕೇಂದ್ರ ಸರ್ಕಾರವು ಕೆಲ ದಿನಗಳ ಹಿಂದೆ ಒಂದು ರಾಷ್ಟ್ರ ಒಂದು ಚುನಾವಣೆ ವಿಚಾರದ ಬಗ್ಗೆ ಅವಲೋಕನ ನಡೆಸಲು ಸಮಿತಿ ರಚಿಸಿದೆ. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ.
ಇದನ್ನೂ ಓದಿ:Bandipur: ರಾಜಾ, ಹಾಯ್ ಬೇಬಿ ಎಂದ ಕೂಡಲೇ ಓಡೋಡಿ ಬಂದ ರೋಹಿತ್ ಆನೆ! ವಿಡಿಯೋ ವೈರಲ್
‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯನ್ನು ಅನುಷ್ಠಾನಗೊಳಿಸುವ ಸಾಧ್ಯತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ರಚಿಸಿರುವ ಸಮಿತಿಯ ಭಾಗವಾಗಲು ಆಹ್ವಾನವನ್ನು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಶನಿವಾರ ನಿರಾಕರಿಸಿದ್ದಾರೆ.
ಸಮಿತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಕ್ಷದ ಅಧ್ಯಕ್ಷ ಗುಲಾಂ ನಬಿ ಆಜಾದ್, 15ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಸೇರಿದ್ದಾರೆ.