Advertisement

Rahul Gandhi ಸೆ. 8ಕ್ಕೆ ಅಮೆರಿಕಕ್ಕೆ ಭೇಟಿ:ಟೆಕ್ಸಾಸ್‌ ವಿವಿಯಲ್ಲಿ ಸಂವಾದ

12:55 AM Sep 01, 2024 | Team Udayavani |

ಹೊಸದಿಲ್ಲಿ: ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೆ. 8ರಿಂದ 10ರ ವರೆಗೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ವಾಷಿಂಗ್ಟನ್‌ ಡಿಸಿ, ಡಲ್ಲಾಸ್‌ ಮತ್ತು ಟೆಕ್ಸಾಸ್‌ ವಿವಿ ಗಳಲ್ಲಿ ಸಂವಾದ ಕಾರ್ಯ ಕ್ರಮದಲ್ಲಿ ಭಾಗವಹಿಸಲಿ ದ್ದಾರೆ. ಈ ಬಗ್ಗೆ ಕಾಂಗ್ರೆಸ್‌ನ ಸಾಗರೋತ್ತರ ಘಟಕದ ಸ್ಯಾಮ್‌ ಪಿತ್ರೋಡಾ ಮಾಹಿತಿ ನೀಡಿದ್ದಾರೆ. ಅಮೆರಿಕದಲ್ಲಿರುವ ಭಾರತೀಯ ಸಮು ದಾಯ, ರಾಜತಾಂತ್ರಿಕರು, ವಿದ್ಯಾರ್ಥಿಗಳು, ಉದ್ಯ ಮಿಗಳು, ನಾಯಕರು ಹಾಗೂ ಅಂತಾರಾಷ್ಟ್ರೀಯ ಮಾಧ್ಯಮಗಳು ಸೇರಿದಂತೆ ಹಲವರ ಮನವಿಯ ಮೇರೆಗೆ ಸಂವಾದ ಆಯೋಜಿಸಲಾಗಿದೆ ಎಂದು ಪಿತ್ರೋಡಾ ತಿಳಿಸಿದ್ದಾರೆ.

Advertisement

ಸೆ. 4ಕ್ಕೆ ಜಮ್ಮು-ಕಾಶ್ಮೀರಕ್ಕೆ: 2 ಚುನಾವಣ ರ್‍ಯಾಲಿಗಳಲ್ಲಿ ಭಾಗಿ
ಅನಂತನಾಗ್‌: ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೆ. 4ರಂದು 2 ರ್‍ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ.

ಈ ಬಗ್ಗೆ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ಅಹ್ಮದ್‌ ಮಿರ್‌ ಕಾಶ್ಮೀರದ ದೂರು, ಜಮ್ಮುವಿನ ಸಂಗಲ್ಡಾನ್‌ನಲ್ಲಿ ಕಾಂಗ್ರೆಸ್‌ ಮತ್ತು ನ್ಯಾಶನಲ್‌ ಕಾನ್ಫರೆನ್ಸ್‌ ಅಭ್ಯರ್ಥಿಗಳ ಪರ ಪ್ರಚಾರ ರಾಹುಲ್‌ ಗಾಂಧಿ ಪ್ರಚಾರ ನಡೆಸಲಿದ್ದಾರೆ ಎಂದರು. ಮಿರ್‌ ಅವರು ದೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಇದೇ ವೇಳೆ, ನ್ಯಾಶನಲ್‌ ಕಾನ್ಫರೆನ್ಸ್‌ ಜತೆಗಿನ ಮೈತ್ರಿಯನ್ನು ರಾಷ್ಟ್ರೀಯ ಹಿತಾಸಕ್ತಿಯ ಒತ್ತಡದ ಹಿನ್ನೆಲೆಯಲ್ಲಿ ಮಾಡಿಕೊಳ್ಳಲಾಗಿದೆ ಎಂದು ಮಿರ್‌ ಹೇಳಿಕೊಂಡಿದ್ದಾರೆ. ಕಾಂಗ್ರೆಸ್‌ 51, ನ್ಯಾಶನಲ್‌ ಕಾನ್ಫರೆನ್ಸ್‌ 32 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next