Advertisement

16ರಂದು ರಾಹುಲ್‌ ಗದ್ದುಗೆಗೆ 

08:00 AM Dec 11, 2017 | Team Udayavani |

ನವದೆಹಲಿ: ಅಧ್ಯಕ್ಷ ಹುದ್ದೆಗೆ ಅವಿರೋಧವಾಗಿ ಆಯ್ಕೆಯಾದ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ 16ರಂದು ಅಧಿಕೃತವಾಗಿ ಅಧ್ಯಕ್ಷ ಹುದ್ದೆಗೇರಲಿದ್ದಾರೆ. 

Advertisement

ಅಭ್ಯರ್ಥಿಗಳ ನಾಮನಿರ್ದೇಶನಕ್ಕೆ ಸೋಮವಾರ ಕೊನೆಯ ದಿನವಾಗಿದ್ದು, ಅಂದೇ ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ. ಈವರೆಗೆ ಒಟ್ಟು 89 ನಾಮನಿರ್ದೇಶನಗಳು ಸಲ್ಲಿಕೆಯಾಗಿವೆ. ಕಾಂಗ್ರೆಸ್‌ನ ಕೇಂದ್ರೀಯ ಚುನಾವಣಾ ಪ್ರಾಧಿಕಾರದ ಮುಖ್ಯಸ್ಥ ಮುಲ್ಲಪಲ್ಲಿ ರಾಮ ಚಂದ್ರನ್‌, ಸದಸ್ಯ ಮಧುಸೂಧನ್‌ ಮಿಸಿŒ ಘೋಷಣೆ ಮಾಡಲಿದ್ದಾರೆ.

16ರಂದು ರಾಹುಲ್‌ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಗ್ಗೆ ಪ್ರಮಾಣಪತ್ರ ಹಸ್ತಾಂತರಿಸಲಾಗುತ್ತದೆ. ಈ ವೇಳೆ ಪ್ರಸ್ತುತ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಇತರ ಹಿರಿಯ ನಾಯಕರು ಹಾಜ ರಿರಲಿದ್ದಾರೆ. ಮಧ್ಯಾಹ್ನ 11ಕ್ಕೆ  ಸೋನಿಯಾ ಅಧಿಕಾರ ಹಸ್ತಾಂತರ ಮಾಡಲಿದ್ದು, ನಂತರ ಪಕ್ಷದ ಹಿರಿಯ ನಾಯಕರನ್ನು ದ್ದೇಶಿಸಿ ರಾಹುಲ್‌ ಮಾತನಾಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next