Advertisement

Davanagere; ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೋರಬೇಕು: ಕೆ.ಎಸ್. ಈಶ್ವರಪ್ಪ ಆಗ್ರಹ

06:12 PM Feb 19, 2024 | Team Udayavani |

ದಾವಣಗೆರೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರಿಗೆ ಆಹ್ವಾನ ಇರಲಿಲ್ಲ ಎಂಬ ಸುಳ್ಳು ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೋರಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕದವರೇ ಆದ ಚಿತ್ರದುರ್ಗದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಒಳಗೊಂಡಂತೆ ಅನೇಕರು ಭಾಗವಹಿಸಿದ್ದಾರೆ ಎಂದರು.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೀಗೆ ಕಾಂಗ್ರೆಸ್‌ ನವರು ಒಂದು ಸುಳ್ಳನ್ನೇ ನೂರು ಬಾರಿ ಹೇಳುವ ಮೂಲಕ ಸತ್ಯ ಮಾಡಲು ಹೊರಟವರು. ಸಿದ್ದರಾಮಯ್ಯ ಹಿಜಾಬ್ ಧರಿಸಿಕೊಂಡು ಬರಬಹುದು ಎಂದು ಹೇಳಿದರು. ಹಿಂದೂ ಸಮಾಜದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ನಾನು ಹಾಗೆ ಹೇಳಿಯೇ ಇಲ್ಲ ಎಂದರು. ಸುಳ್ಳು ಹೇಳುವುದರಲ್ಲಿ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದು ಈಶ್ವರಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next