ಬೆಂಗಳೂರು: ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷದ ಪೂರ್ಣಾವಧಿ ಅಧ್ಯಕ್ಷರಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾನು ಈ ಹಿಂದೆಯೂ ಹೇಳಿದಂತೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ತಕ್ಷಣವೇ ಪೂರ್ಣಾವಧಿಯ ಪಾತ್ರದಲ್ಲಿ ತೆಗೆದುಕೊಳ್ಳಬೇಕು. ಇದು ನನ್ನಂತಹ ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರ ಆಶಯ” ಎಂದಿದ್ದಾರೆ.
ಇದನ್ನೂ ಓದಿ:ಗೋಲ್ಡನ್ ಟೆಂಪಲ್, ಜಲಿಯನ್ ವಾಲಾ ಬಾಗ್ ಗೆ ಕೇಜ್ರಿವಾಲ್, ಮಾನ್ ಭೇಟಿ
ಪಂಚರಾಜ್ಯ ವಿಧಾನಸಭೆ ಚುನಾವಣೆಗಳಲ್ಲಿನ ಸೋಲಿನ ಬಳಿಕ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಗಾಂಧಿ ಕುಟುಂಬದ ಹೊರತಾಗಿ ಇತರರಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಮಾತುಗಳ ನಡುವೆ ಕೆಪಿಸಿಸಿ ಅಧ್ಯಕ್ಷರು ಈ ಟ್ವೀಟ್ ಮಾಡಿದ್ದಾರೆ.
Related Articles
ಕಾಂಗ್ರೆಸ್ ಸಭೆ: ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಸೋಲಿನ ನಂತರ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಮಿತಿ ಸಭೆಯು ಸೋನಿಯಾ ಗಾಂಧಿ ನೇತೃತ್ವದಲ್ಲಿ ರವಿವಾರ 10 ಜನಪಥ್‌ನಲ್ಲಿ ನಡೆಯಿತು.
ಪ್ರತಿಪಕ್ಷಗಳ ಜತೆಗೂಡಿ ಸರ್ಕಾರದ ವಿರುದ್ಧ ಹೋರಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಕೆಸಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ಆನಂದ್ ಶರ್ಮಾ, ಮನೀಶ್ ತಿವಾರಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
“ಮುಂಬರುವ ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಚರ್ಚೆ ನಡೆಸಿದ್ದೇವೆ. ಉಕ್ರೇನ್‌ನಿಂದ ಹಿಂತಿರುಗುವ ವೈದ್ಯಕೀಯ ವಿದ್ಯಾರ್ಥಿಗಳ ಕುರಿತು, ರೈತರ ಎಂಎಸ್‌ಪಿ , ಹಣದುಬ್ಬರ, ನಿರುದ್ಯೋಗ, ಸಮಸ್ಯೆಗಳನ್ನು ಪ್ರಸ್ತಾಪಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಭೆಯ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.