Advertisement
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವ್ಯಾಕ್ಸಿನ್ ಸ್ಟ್ರ್ಯಾಟಜಿ ನೋಟು ಅಮಾನ್ಯೀಕರಣಕಿಂತ ಏನೂ ಕಡಿಮೆ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
Related Articles
Advertisement
ಓದಿ : ಕೋವಿಡ್ ನನ್ನು ಲಘುವಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ : ಪ್ರಿಯಾಂಕ ಚೋಪ್ರಾ
ದೇಶದಲ್ಲಿ ಕೋವಿಡ್ ಸಂಕಷ್ಟವಿರುವಾಗ, ವೈದ್ಯಕೀಯ ಆಮ್ಲಜನಕ, ಮತ್ತು ಆಸ್ಪತ್ರೆಯ ಹಾಸಿಗೆಗಳ ಕೊರತೆಗಾಗಿ ಜನರು ಕಷ್ಟ ಪಡುತ್ತಿರುವಾಗ, ಚುನಾವಣಾ ಪ್ರಚಾರದಲ್ಲಿ ಕೇಂದ್ರ ನಾಯಕರು ನಗುತ್ತಿದ್ದರು ಎಂದು ಪ್ರಿಯಾಂಕಾ ಹೇಳಿದ್ದಾರೆ.
ಇನ್ನು, ದೇಶದಲ್ಲಿ ನೀಡಲಾಗುತ್ತಿರುವ ಕೋವಿಡ್ ಲಸಿಕೆ ಪ್ರಮಾಣವು ಬುಧವಾರ 13,01,19,310 ದಾಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಪ್ರಸ್ತುತ ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಪರಿಣಾಮದಿಂದಾಗಿ ಭಾರತವು ಕಳೆದ 24 ಗಂಟೆಗಳಲ್ಲಿ ಸುಮಾರು 3 ಲಕ್ಷ ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, 2,95,041 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 2,023 ಸಾವುಗಳು ವರದಿಯಾಗಿವೆ, ಒಟ್ಟು ಪ್ರಕರಣಗಳನ್ನು 1,56,16,130 ಕ್ಕೆ ಏರಿಕೆಯಾಗಿದೆ. ಇದರಲ್ಲಿ 21,57,538 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ತಿಳಿಸಿದೆ.
ಓದಿ : ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಮರಳಿದ ಸಾರಿಗೆ ನೌಕರರು