ಬೆಂಗಳೂರು/ತುರುವೇಕೆರೆ: ಕರ್ನಾಟಕ ಕಾಂಗ್ರೆಸ್‌ನಲ್ಲಿ ಯಾವುದೇ ತಿಕ್ಕಾಟವಿಲ್ಲ, ನಾವು ಅಧಿಕಾರಕ್ಕೆ ಬಂದ ಅನಂತರ ಮುಖ್ಯಮಂತ್ರಿ ವಿಚಾರ ವನ್ನು ಪಕ್ಷದ ವೇದಿಕೆಯಲ್ಲಿ ತೀರ್ಮಾ ನಿಸಲಾಗುವುದು ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.
ಈ ಮೂಲಕ ಕಾಂಗ್ರೆಸ್‌ನಲ್ಲಿ ಮುಖ್ಯ ಮಂತ್ರಿ ವಿಚಾರದ ಚರ್ಚೆಗೆ ತಡೆ ಹಾಕಿ ದ್ದಾರೆ. ನಮ್ಮ ಪಕ್ಷ ಸರ್ವಾಧಿಕಾರಿ ಮನಸ್ಥಿತಿಯದಲ್ಲ. ನಮ್ಮಲ್ಲಿ ಎಲ್ಲರ ಅಭಿ ಪ್ರಾಯ, ಭಾವನೆ, ಚರ್ಚೆ, ವಿಭಿನ್ನ ದೃಷ್ಟಿ ಕೋನಗಳಿಗೆ ಅವಕಾಶವಿದೆ. ಚುನಾವಣೆಯಲ್ಲಿ ಗೆಲ್ಲಲು ಎಲ್ಲ ನಾಯಕರೂ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎಂದು ರಾಹುಲ್ ಗಾಂಧಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ನಮ್ಮಲ್ಲಿ ಹಲವು ಸಮರ್ಥ ನಾಯಕರಿದ್ದು, ಪಕ್ಷ ಚುನಾವಣೆಯಲ್ಲಿ ಗೆದ್ದ ಅನಂತರ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು ಎಂದರು.
ಚುನಾವಣೆಯಲ್ಲಿ ಬಹುಮತ ಬರ ದಿದ್ದರೆ ಕಾಂಗ್ರೆಸ್ ಪಕ್ಷವು ಜೆಡಿಎಸ್ ಜತೆ ಕೈ ಜೋಡಿಸುತ್ತದೆಯೇ ಎಂಬ ಪ್ರಶ್ನೆಗೆ, ಇದಕ್ಕೆ ಅಧ್ಯಕ್ಷರು ಮತ್ತು ಶಾಸಕಾಂಗ ಪಕ್ಷದ ನಾಯಕರು ಉತ್ತರ ನೀಡುತ್ತಾರೆ. ನನ್ನ ಪ್ರಕಾರ ಕಾಂಗ್ರೆಸ್ ಬಹುಮತದ ಗೆಲುವು ಸಾಧಿಸಲಿದೆ ಎಂದರು.
ವಿವಿಧ ವರ್ಗಗಳ ಜನರ ಜತೆಗಿನ ಸಂವಾದದ ವೇಳೆ ಬಿಜೆಪಿ ಸರಕಾರದ 40 ಪರ್ಸೆಂಟ್ ಕಮಿಷನ್ ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ ವಿಚಾರವಾಗಿ ನಾಗರಿಕರು ಬೇಸತ್ತಿರುವುದು ಸ್ಪಷ್ಟವಾಗಿದೆ. ಹೀಗಾಗಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.