ಬೆಂಗಳೂರು: ರಾಜಯದಲ್ಲಿ ಚುನಾವಣ ಬಹಿರಂಗ ಪ್ರಚಾರದ ಅಂತಿಮ ದಿನವಾದ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ನಲ್ಲಿ ಪ್ರಯಾಣಿಸಿ ಕಾಲೇಜು ವಿದ್ಯಾರ್ಥಿಗಳು ಮತ್ತು ಉದ್ಯೋಗಸ್ಥ ಮಹಿಳೆಯರೊಂದಿಗೆ ಮಾತನಾಡಿದರು.
ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿರುವ ‘ಕೆಫೆ ಕಾಫಿ ಡೇ’ ಔಟ್‌ಲೆಟ್‌ನಲ್ಲಿ ಒಂದು ಕಾಫಿ ಕುಡಿದ ನಂತರ ರಾಹುಲ್ ಗಾಂಧ ಬಿಎಂಟಿಸಿ ಬಸ್‌ಗೆ ಏರಿದರು.ಲಿಂಗರಾಜಪುರಂನಲ್ಲಿ ಬಸ್‌ನಿಂದ ಇಳಿದ ಗಾಂಧಿ ಅಲ್ಲಿ ಮತ್ತೆ ಬಸ್ ನಿಲ್ದಾಣದಲ್ಲಿ ಮಹಿಳೆಯರೊಂದಿಗೆ ಮಾತನಾಡಿದರು.
”ಶಕ್ತಿ! ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸಲಿದೆ ಕಾಂಗ್ರೆಸ್! ಇದರ ಪ್ರಯುಕ್ತ ರಾಹುಲ್ ಗಾಂಧಿಯವರು ಬಿಎಂಟಿಸಿ ಬಸ್ಸಿನಲ್ಲಿ ಪ್ರಯಾಣಿಸಿ ಪ್ರಯಾಣಿಕರೊಂದಿಗೆ ಮಾತನಾಡಿ ಅವರ ಅಭಿಪ್ರಾಯವನ್ನು ಸಂಗ್ರಹಿಸಿದರು.” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಕರ್ನಾಟಕದ ಬಗ್ಗೆ ಅವರ ದೃಷ್ಟಿಕೋನವನ್ನು ಅರ್ಥಮಾಡಿಕೊಳ್ಳಲು ಮಹಿಳಾ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ, ಗೃಹಲಕ್ಷ್ಮಿ ಯೋಜನೆ (ಮನೆಯ ಮುಖ್ಯಸ್ಥ ಮಹಿಳೆಗೆ ತಿಂಗಳಿಗೆ 2,000 ರೂ.) ಮತ್ತು ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ)ಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಕಾಂಗ್ರೆಸ್‌ನ ‘ಖಾತರಿ’ ಸೇರಿದಂತೆ ವಿಷಯಗಳ ಕುರಿತು ಅವರು ಚರ್ಚಿಸಿದರು.