Advertisement
ಸೋಮವಾರ ಇಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಆಂತರಿಕ ಚುನಾವಣಾ ವೇಳಾಪಟ್ಟಿ ನಿಗದಿ ಮಾಡಲಾಗಿದೆ. ಡಿ.19ರೊಳಗೆ ಚುನಾವಣಾ ಪ್ರಕ್ರಿಯೆ ಮುಗಿ ಸುವ ಬಗ್ಗೆ ನಿರ್ಧರಿಸಲಾಗಿದೆ. ಡಿ.1ರಿಂದ ಡಿ.4ರ ವರೆಗೆ ನಾಮಪತ್ರ ಸಲ್ಲಿಸಬೇಕಿದೆ. ಅಂದು ಮಧ್ಯಾಹ್ನ 3 ಗಂಟೆಗೆ ನಾಮಪತ್ರದ ಪರಿಶೀಲನೆ ನಡೆಯಲಿದ್ದು, 3.30ಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ರಾಹುಲ್ ಒಬ್ಬರೇ ಉಮೇದುವಾರಿಕೆ ಸಲ್ಲಿಸಿ ದರೆ, ಮುಂದಿನ ಚುನಾವಣಾ ಪ್ರಕ್ರಿಯೆ ನಡೆಯುವುದಿಲ್ಲ. ಅಂದೇ ಕಾಂಗ್ರೆಸ್‌ಗೆ ಹೊಸ ಅಧ್ಯಕ್ಷರು ಯಾರು ಎಂಬುದು ನಿಗದಿ ಯಾಗಲಿದೆ. ಗುಜರಾತ್ ಚುನಾವಣೆಗಿಂತಲೂ ಮೊದಲೇ ಹೊಸ ಅಧ್ಯಕ್ಷ ಸಿಗಲಿದ್ದಾರೆ.
ಸಭೆಯ ಅನಂತರ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುಜೇìವಾಲ ಅವರು, ಮುಂದೆಯೂ ಸೋನಿಯಾ ಗಾಂಧಿ ಅವರ ಮಾರ್ಗದರ್ಶನ ಕಾಂಗ್ರೆಸ್‌ಗೆ ಸಿಗಲಿದೆ ಎಂದಿದ್ದಾರೆ. ಸೋನಿಯಾ ಅವರ ಮುಂದಿನ ಹೊಣೆ ಏನು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಒಮ್ಮೆ ಚುನಾವಣಾ ಪ್ರಕ್ರಿಯೆ ಮುಗಿಯಲಿ. ಬಳಿಕ ಆ ಬಗ್ಗೆ ಹೇಳಲು ನಾನು ಖುಷಿ ಪಡುತ್ತೇನೆ ಎಂದರು.
Related Articles
ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಡಿ.18 ರಂದು ಪ್ರಕಟವಾಗಲಿದೆ. ಮಾರನೇ ದಿನವೇ ರಾಹುಲ್ ಕಾಂಗ್ರೆಸ್ ಅಧ್ಯಕ್ಷರಾಗಿ ಚುಕ್ಕಾಣಿ ಹಿಡಿಯಲಿದ್ದಾರೆ. ಹೀಗಾಗಿ ಈ ಎರಡೂ ರಾಜ್ಯಗಳಲ್ಲಿ ಗೆಲ್ಲುವ ಒತ್ತಡ ರಾಹುಲ್ ಮೇಲೆ ಇದೆ. ಗುಜರಾತ್‌ನಲ್ಲಿ 22 ವರ್ಷಗಳಿಂದ ಬಿಜೆಪಿಯೇ ಅಧಿಕಾರ ನಡೆಸುತ್ತಿದ್ದು, ಈ ಬಾರಿ ಗೆಲ್ಲಲೇಬೇಕು ಎಂದು ಕಾಂಗ್ರೆಸ್ ನಾನಾ ತಂತ್ರಗಳಿಗೆ ಮೊರೆ ಹೋಗಿದೆ. ಇನ್ನು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ನದ್ದೇ ಅಧಿಕಾರವಿದ್ದು, ಇಲ್ಲಿ ಉಳಿಸಿಕೊಳ್ಳುವ ಜರೂರತ್ತಿದೆ.
Advertisement