ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಂವಾದದಲ್ಲಿ ಪಾಲ್ಗೊಳ್ಳಲು ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಲಿದ್ದು, ಸಂವಾದದ ನಂತರ ರಾಜ್ಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ. ರಫೆಲ್ ಯುದ್ಧ ವಿಮಾನ ಖರೀದಿ ಅವ್ಯವಹಾರದ ಕುರಿತು ಕೇಂದ್ರ ಸರ್ಕಾರ ಎಚ್‌ಎಎಲ್ ಬಗ್ಗೆ ತಾಳಿರುವ ನಿಲುವಿನ ಕುರಿತಾಗಿ ರಾಹುಲ್ ಗಾಂಧಿ ಎಚ್‌ಎಎಲ್ ಸಿಬ್ಬಂದಿ ಜತೆ ಮಾಹಿತಿ ಹಂಚಿಕೊಳ್ಳುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಸ್ತುವಾರಿ ಕೆ.ಸಿ.ವೇಣುಗೋಪಾಲ್ ನೇತೃತ್ವದಲ್ಲಿ ಪೂರ್ವ ಭಾವಿ ಸಭೆ ನಡೆಸಲಾಗಿದ್ದು, ಎಚ್‌ಎಎಲ್ ನೌಕರರೊಡನೆ ಸಂವಾದ, ಕಾರ್ಯಕರ್ತ ರೊಂದಿಗಿನ ಸಭೆ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಕುರಿತಂತೆ ಬುಧವಾರ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.
Advertisement