ಬಳ್ಳಾರಿ : ಪ್ರಸ್ತುತ ಕರ್ನಾಟಕದಲ್ಲಿ ‘ಭಾರತ್ ಜೋಡೋ’ ಯಾತ್ರೆಯನ್ನು ಮುನ್ನಡೆಸುತ್ತಿರುವ ರಾಹುಲ್ ಗಾಂಧಿ ಅವರು ಇಲ್ಲಿನ ಸಂಗನಕಲ್ಲು ಯಾತ್ರೆಯ ಕ್ಯಾಂಪ್‌ಸೈಟ್‌ನಲ್ಲಿ ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಮತ ಚಲಾಯಿಸಲಿದ್ದಾರೆ ಎಂದು ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಭಾನುವಾರ ಹೇಳಿದ್ದಾರೆ.
ಇದನ್ನೂ ಓದಿ : ಗಾಂಧಿ ಕುಟುಂಬದ ಸಲಹೆ, ಬೆಂಬಲ ಪಡೆಯಲು ನಾಚಿಕೆಪಡುವುದಿಲ್ಲ: ಖರ್ಗೆ
“ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಳೆ ರಾಹುಲ್ ಗಾಂಧಿ ಅವರು ಎಲ್ಲಿ ಮತ ಚಲಾಯಿಸುತ್ತಾರೆ ಎಂಬ ಪ್ರಶ್ನೆಗಳಿವೆ. ಯಾವುದೇ ಊಹಾಪೋಹ ಇರಬಾರದು. ಪಿಸಿಸಿ ಪ್ರತಿನಿಧಿಗಳಾದ ಸುಮಾರು 40 ಭಾರತ ಯಾತ್ರಿಗಳೊಂದಿಗೆ ಬಳ್ಳಾರಿಯ ಸಂಗನಕಲ್ಲುನಲ್ಲಿರುವ ‘ಭಾರತ್ ಜೋಡೋ’ ಕ್ಯಾಂಪ್‌ಸೈಟ್‌ನಲ್ಲಿ ಅವರು ಮತದಾನ ಮಾಡಲಿದ್ದಾರೆ ಎಂದು ಜೈರಾಮ್ ರಮೇಶ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಅಕ್ಟೋಬರ್ 17 ರಂದು ಪಕ್ಷದ ಅತ್ಯುನ್ನತ ಹುದ್ದೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಫಲಿತಾಂಶ ಪ್ರಕಟವಾಗಲಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಈ ಚುನಾವಣೆಯಲ್ಲಿ ತಿರುವನಂತಪುರಂ ಸಂಸದ ಶಶಿ ತರೂರ್ ಅವರು ಹಿರಿಯ ಕಾಂಗ್ರೆಸ್ಸಿಗ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಣಕ್ಕಿಳಿದಿದ್ದಾರೆ.