Advertisement

ದೇವರ ನಾಡಿನಿಂದ ಲೋಕಸಭೆಗೆ ‘ರಾಗಾ’ಸ್ಪರ್ಧೆ ಖಚಿತ

09:13 AM Apr 01, 2019 | Team Udayavani |

ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಮತ್ತು ಯುವ ನಾಯಕ ರಾಹುಲ್‌ ಗಾಂಧಿ ಅವರು ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸುವುದು ಖಚಿತವಾಗಿದೆ. ಈ ವಿಷಯವನ್ನು ಕಾಂಗ್ರೆಸ್‌ ಪಕ್ಷದ ಮೂಲಗಳು ಭಾನುವಾರ ಖಚಿತಪಡಿಸಿವೆ. ರಾಹುಲ್‌ ಗಾಂಧಿ ಅವರು ಪ್ರಸ್ತುತ ಉತ್ತರ ಪ್ರದೇಶದ ಅಮೇಥಿ ಲೋಕ ಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಈ ಬಾರಿಯೂ ಸಹ ರಾಹುಲ್‌ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ. ಮತ್ತು ದಕ್ಷಿಣ ಭಾರತದ ಕೇರಳ ರಾಜ್ಯದಿಂದಲೂ ಸಹ ರಾಗಾ ಅವರು ತಮ್ಮ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ.

Advertisement

ದಕ್ಷಿಣ ಭಾರತದ ಎಲ್ಲಾ ರಾಜ್ಯಗಳೂ ತಮ್ಮ ತಮ್ಮ ರಾಜ್ಯಗಳಿಂದ ಸ್ಪರ್ಧಿಸುವಂತೆ ರಾಹುಲ್‌ ಗಾಂಧಿ ಅವರಿಗೆ ಮನವಿ ಮಾಡಿಕೊಂಡಿದ್ದವು. ಈ ವಿಚಾರವಾಗಿ ಬಹಳಷ್ಟು ಯೋಚಿಸಿ ಚರ್ಚಿಸಿದ ಬಳಿಕ ನಮ್ಮ ಪಕ್ಷದ ಅಧ್ಯಕ್ಷರು ಕೇರಳದ ವಯನಾಡ್‌ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಲು ಸಮ್ಮತಿಸಿದ್ದಾರೆ. ಈ ವಯನಾಡ್‌ ಕ್ಷೇತ್ರವು ತನ್ನ ಗಡಿಭಾಗವನ್ನು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳೊಂದಿಗೆ ಹಂಚಿಕೊಳ್ಳುತ್ತಿದೆ. ಹಾಗಾಗಿ ಈ ಎರಡು ರಾಜ್ಯಗಳಲ್ಲೂ ಕಾಂಗ್ರೆಸ್‌ ಪಕ್ಷಕ್ಕೆ ರಾಗಾ ಸ್ಪರ್ಧೆ ಬಲತುಂಬಲಿದೆ ಎಂದು ಹಿರಿಯ ಕಾಂಗ್ರೆಸ್‌ ನಾಯಕ ಎ.ಕೆ. ಆಂಟನಿ ಅವರು ನವದೆಹಲಿಯಲ್ಲಿ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next