Advertisement

ಸಿದ್ದರಾಮಯ್ಯೋತ್ಸವಕ್ಕೂ ಮುನ್ನ ಪ್ರಮುಖ ಕಾಂಗ್ರೆಸ್ ನಾಯಕರೊಂದಿಗೆ ರಾಹುಲ್ ಸಭೆ

06:02 PM Jul 31, 2022 | Team Udayavani |

ಚಿತ್ರದುರ್ಗ: 2023ರ ವಿಧಾನಸಭಾ ಚುನಾವಣೆಗೆ ತಯಾರಿಯ ಅಬ್ಬರದ ಗದ್ದಲದ ನಡುವೆಯೇ ”ಆಗಸ್ಟ್ 2ರಂದು ನಡೆಯಲಿರುವ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಸಂಭ್ರಮದ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾನುವಾರ ಹೇಳಿದ್ದಾರೆ.

Advertisement

ಭೇಟಿಯ ಸಂದರ್ಭದಲ್ಲಿ ಆಗಸ್ಟ್ 3 ರಂದು ರಾಹುಲ್ ಗಾಂಧಿ ಅವರು ಮುರುಘಾ ಮಠಕ್ಕೆ ಮಠಕ್ಕೆ ಭೇಟಿ ನೀಡಿ, ಶ್ರೀ ಶಿವಮೂರ್ತಿ ಮುರುಘಾ ಶರಣರು ಮತ್ತು ಇತರ ಮಠಾಧೀಶರನ್ನು ಭೇಟಿ ಮಾಡಲು ಬಯಸಿದ್ದರು. ಅದಕ್ಕೂ ಮುನ್ನ ಅವರು ಆಗಸ್ಟ್ 2 ರಂದು ಹುಬ್ಬಳ್ಳಿಯಲ್ಲಿ ಸುಮಾರು 35 ರಾಜ್ಯ ನಾಯಕರ ಪಕ್ಷದ ರಾಜ್ಯ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಮಠದಲ್ಲಿ ಶ್ರೀಗಳನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅವರ 75 ನೇ ಜನ್ಮದಿನಾಚರಣೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದು, ನಂತರ ಹುಬ್ಬಳ್ಳಿ ಮೂಲಕ ನವದೆಹಲಿಗೆ ತೆರಳಲಿದ್ದಾರೆ.

ಸೆಪ್ಟೆಂಬರ್‌ನಲ್ಲಿ ಕಾಂಗ್ರೆಸ್‌ನ ‘ಭಾರತ್ ಜೋಡೋ ಯಾತ್ರೆ’ಯ ಸಂದರ್ಭದಲ್ಲಿ ಅವರು ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದಾರೆ ಆ ವೇಳೆ ಇತರ ಮಠಗಳಿಗೆ ಭೇಟಿಯ ಕುರಿತು ತೀರ್ಮಾನಿಸಲಾಗುತ್ತದೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next