ಬೆಂಗಳೂರು: ಭಾರತ್ ಜೋಡೋ ಅನಂತರ ರಾಹುಲ್‌ಗಾಂಧಿ ಮತ್ತೆ ರಾಜ್ಯಕ್ಕೆ ಆಗಮಿಸುತ್ತಿದ್ದು ಬೆಳಗಾವಿಯ ಕಿತ್ತೂರಿನಲ್ಲಿ ಯುವಧ್ವನಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಾರ್ಚ್ 20ರಂದು ಯುವಧ್ವನಿ ರ‍್ಯಾಲಿ ಆಯೋಜಿಸಲಾಗಿದ್ದು, ಯುವಕರಿಗಾಗಿಯೇ ಪ್ರತ್ಯೇಕ ಪ್ರಣಾಳಿಕೆ ಘೋಷಣೆ ಮಾಡುವ ಸಾಧ್ಯತೆಯಿದೆ. ರಾಹುಲ್ ಗಾಂಧಿ ಆಗಮನ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾರ್ಚ್ 16ರಂದು ಕಿತ್ತೂರು ಕರ್ನಾಟಕ ಭಾಗದ ಮುಖಂಡರ ಸಭೆ ಕರೆದಿದ್ದಾರೆ.
ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಬೆಳಗಾವಿ ನಗರ, ಗ್ರಾಮಾಂತರ, ಚಿಕ್ಕೋಡಿ, ಹುಬ್ಬಳ್ಳಿ ನಗರ, ಧಾರವಾಡ ಗ್ರಾಮಾಂತರ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ ಜಿಲ್ಲೆಗಳ ಮುಖಂಡರ ಸಭೆ ಕರೆಯಲಾಗಿದೆ. ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳಿಗೆ ಆಹ್ವಾನ ನೀಡಲಾಗಿದೆ.