ನವದೆಹಲಿ: ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರು ಮೇ 31ರಿಂದ ಹತ್ತು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ವಿಶೇಷವಾಗಿ ಜೂ.4ರಂದು ನ್ಯೂಯಾರ್ಕ್ನ ಮ್ಯಾಡಿಸನ್ ಸ್ಕ್ವಾರ್ ಗಾರ್ಡನ್ನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲಿ ಅನಿವಾಸಿ ಭಾರತೀಯರ ಐದು ಸಾವಿರ ಮಂದಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ಸ್ಥಳದಲ್ಲಿ ಪ್ರಧಾನಿ ಮೋದಿಯವರು ಮಾತನಾಡಿದ್ದುಂಟು. ವಯನಾಡ್ನ ಮಾಜಿ ಸಂಸದ ವಾಷಿಂಗ್ಟನ್ ಮತ್ತು ಕ್ಯಾಲಿಫೋರ್ನಿಯಾಕ್ಕೂ ತೆರಳಲಿದ್ದಾರೆ.
ಪ್ರವಾಸದ ವೇಳೆ, ಅಮೆರಿಕದ ಪ್ರಮುಖ ರಾಜಕಾರಣಿಗಳು, ಉದ್ಯಮಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಯು.ಕೆ. ಪ್ರವಾಸದ ವೇಳೆ ಭಾರತದ ಪ್ರಜಾಪ್ರಭುತ್ವ ಒತ್ತಡದಲ್ಲಿ ಇದೆ ಎಂದು ಹೇಳಿ ವಿವಾದಕ್ಕೆ ಒಳಗಾಗಿದ್ದರು.