ಕಾಪು: ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆ ರಂಗೇರಿದ್ದು, ಪ್ರಮುಖ ರಾಜಕೀಯ ಪಕ್ಷದ ಘಟಾನುಘಟಿಗಳು ಜಿಲ್ಲೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಗುರುವಾರ(ಇಂದು) ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರು ಉಡುಪಿಗೆ ಭೇಟಿ ನೀಡಿದರು.
ಮಧ್ಯಾಹ್ನ 12 ಕ್ಕೆ ದಿಲ್ಲಿಯಿಂದ ಹೊರಟ ಅವರು ಶಿವಮೊಗ್ಗ ಆಗಮಿಸಿ ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಆದಿ ಉಡುಪಿ ಹೆಲಿಪ್ಯಾಡ್ ಗೆ ಆಗಮಿಸಿದರು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದರು. ಅನಂತರ ಬಿಗು ಭದ್ರತೆಯಲ್ಲಿ ಕಾಪು ಕ್ಷೇತ್ರಕ್ಕೆ ಆಗಮಿಸಿದ ಅವರು ಉಚ್ಚಿಲ ಶಾಲಿನಿ ಡಾ.ಜಿ. ಶಂಕರ್ ಸಭಾಂಗಣದಲ್ಲಿ ಆಯೋಜಿಸಿದ ಮೀನುಗಾರರ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಸಹಸ್ರ ಸಂಖ್ಯೆಯಲ್ಲಿ ಮೀನುಗಾರ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಅಧಿಕಾರಿಗಳಿಂದ ಹೆಲಿಕಾಫ್ಟರ್ ತಪಾಸಣೆ:
ಚುನಾವಣಾ ಪ್ರಚಾರಕ್ಕಾಗಿ ಉಡುಪಿಗೆ ಬಂದ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರ ಹೆಲಿಕಾಫ್ಟರ್ ಅನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದರು. ಆದಿ ಉಡುಪಿ ಹೆಲಿಪ್ಯಾಡ್ ನಲ್ಲಿ ಅಧಿಕಾರಿಗಳ ತಂಡ ತಪಾಸಣೆ ನಡೆಸಿದರು.
ಇದನ್ನೂ ಓದಿ: “ಶೆಟ್ಟರ್ ಗೆಲುವು ನಿಶ್ಚಿತ, ಕಾಂಗ್ರೆಸ್ ಬರುವುದು ನಿಶ್ಚಿತ..” ರಕ್ತದಲ್ಲಿ ಬರೆದ ಅಭಿಮಾನಿ