Advertisement

ನೆನಪಿನ ಬುತ್ತಿಯನ್ನ ನೀಡಿದ್ದಾರೆ: ಪುನೀತ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ

11:29 AM Apr 01, 2022 | Team Udayavani |

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿ ಕನ್ನಡದ ಸೂಪರ್‌ಸ್ಟಾರ್‌ಗೆ ಶ್ರದ್ಧಾಂಜಲಿ ಸಲ್ಲಿಸಿದರು.

Advertisement

ಪುನೀತ್ ಅವರ ಪತ್ನಿ ಅಶ್ವಿನಿ, ಪುತ್ರಿ ವಂದಿತಾ ಹಾಗೂ ನಟ ರಾಘವೇಂದ್ರ ರಾಜ್‌ಕುಮಾರ್ ಅವರನ್ನು ರಾಹುಲ್ ಭೇಟಿಯಾಗಿ ಸಾಂತ್ವನ ಹೇಳಿದರು. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರ ಪ್ರಮುಖ ಕಾಂಗ್ರೆಸ್ ನಾಯಕರು ಈ ವೇಳೆ ಜತೆಯಲ್ಲಿದ್ದರು.

ಕನ್ನಡದ ಖ್ಯಾತ ನಟರಾಗಿದ್ದ ಶ್ರೀ ಪುನೀತ್ ರಾಜಕುಮಾರ್ ಅವರ ನಿವಾಸದಲ್ಲಿ ಇಂದು ಅವರ ಪತ್ನಿ ಅಶ್ವಿನಿ ಮತ್ತು ಕುಟುಂಬವನ್ನು ಭೇಟಿ ಮಾಡಿ ಪುನೀತ್ ಅವರ ಅಗಲಿಕೆಗೆ ನನ್ನ ಸಂತಾಪಗಳನ್ನು ಸೂಚಿಸಿದೆ. ಅತ್ಯಂತ ಕಡಿಮೆ ವಯಸ್ಸಿನಲ್ಲೇ ಪುನೀತ್ ಅವರು ಕೋಟ್ಯಂತರ ಕನ್ನಡಿಗರ ಮನೆ ಮನಗಳಿಗೆ ಎಂದೂ ಮರೆಯಲಾಗದಂತಹ ನೆನಪಿನ ಬುತ್ತಿಯನ್ನ ನೀಡಿದ್ದಾರೆ. ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next