ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕೆಂಪುಕೋಟೆಯಲ್ಲಿ (ಆಗಸ್ಟ್ 15) ಸ್ವಾತಂತ್ರ್ಯ ಅಮೃತ ಮಹೋತ್ಸವದ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ವೇಳೆ ಭ್ರಷ್ಟಾಚಾರ ಮತ್ತು ವಂಶಾಡಳಿತ ದೇಶಕ್ಕೆ ದೊಡ್ಡ ಅಪಾಯಕಾರಿ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನಿರಾಕರಿಸಿದ್ದಾರೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಶಿವಮೊಗ್ಗ: ಸಾವರ್ಕರ್ –ಟಿಪ್ಪು ಫೋಟೋ ವಿಚಾರ: ಗುಂಪುಗಳ ನಡುವೆ ಹೊಡೆದಾಟ,144 ಸೆಕ್ಷನ್ ಜಾರಿ
ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತ ಭಾರತ ಎದುರಿಸುತ್ತಿರುವ ಎರಡು ದೊಡ್ಡ ಸವಾಲುಗಳಾಗಿವೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಭ್ರಷ್ಟಾಚಾರದ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಡುವ ಮೂಲಕ ದೇಶದಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕಾಗಿದೆ ಎಂದು ಪ್ರಧಾನಿ ಕರೆ ನೀಡಿದ್ದರು.
ವಂಶಾಡಳಿತ ಮತ್ತು ಕುಟುಂಬ ರಾಜಕಾರಣ ಕೇವಲ ರಾಜಕೀಯಕ್ಕೆ ಮತ್ರ ಸೀಮಿತವಾಗಿಲ್ಲ ಎಂದು ಪ್ರಧಾನಿ ಮೋದಿ ತಿಳಿಸಿದ್ದರು. ವಂಶಾಡಳಿತದಿಂದ ನಮ್ಮ ಹಲವು ವ್ಯವಸ್ಥೆಗಳ ಮೇಲೆ ಪರಿಣಾಮ ಬೀರಿದೆ. ಅಷ್ಟೇ ಅಲ್ಲ ಭ್ರಷ್ಟಾಚಾರ ಹೆಚ್ಚಳವಾಗಲೂ ಕಾರಣವಾಗಿದೆ ಎಂದು ಟೀಕಿಸಿದ್ದರು.
ಪ್ರಧಾನಿಯವರ ಈ ಹೇಳಿಕೆ ಕುರಿತು ರಾಹುಲ್ ಗಾಂಧಿಗೆ ಪತ್ರಕರ್ತರು ಪ್ರಶ್ನೆ ಕೇಳಿದಾಗ, ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ಎಂದು ಹೇಳಿ ನುಣುಚಿಕೊಂಡಿರುವುದಾಗಿ ವರದಿ ತಿಳಿಸಿದೆ.