ಮಧುರೈ: ಪೊಂಗಲ್ ಹಬ್ಬದ ಪ್ರಯುಕ್ತ ತಮಿಳುನಾಡಿನ ಅವನಿಯಪುರಂನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ವೀಕ್ಷಿಸಿದರು.
ಪೊಂಗಲ್ ಹಬ್ಬದಲ್ಲಿ ಪಾಲ್ಗೊಳ್ಳಲೆಂದು ತಮಿಳುನಾಡಿಗೆ ಆಗಮಿಸಿದ ರಾಹುಲ್ ಗಾಂಧಿ ಜಲ್ಲಿಕಟ್ಟು ವೀಕ್ಷಿಸಿದರು. ಈ ವೇಳೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ರಾಹುಲ್ ಗಾಂಧಿಗೆ ಸಾಥ್ ನೀಡಿದರು.
ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಭಾಷೆ, ಸಂಸ್ಕೃತಿಯನ್ನು ಬದಿಗಿರಿಸಿ, ತಮಿಳುನಾಡು ಜನರ ಮೇಲೆ ಒರಟು ಭಾವ ತೋರಿಸಬಹುದೆಂದು ಯೋಚಿಸುವವರಿಗೆ ಸಂದೇಶ ನೀಡಲು ನಾನಿಲ್ಲಿ ಬಂದಿದ್ದೇನೆ ಎಂದರು.
ಇದನ್ನೂ ಓದಿ:ಚರಗ ಚೆಲ್ಲಿ ಭೂತಾಯಿಗೆ ಭಕ್ತಿ ಸಮರ್ಪಣೆ : ರೈತ ಕುಟುಂಬಗಳಿಂದ ಸಡಗರದ ಎಳ್ಳ ಅಮಾವಾಸ್ಯೆ ಆಚರಣೆ
ಜಲ್ಲಿಕಟ್ಟು ಕ್ರೀಡೆ ನಡೆಸಲು ಇಲ್ಲಿ ಮಾಡಿರುವ ವ್ಯವಸ್ಥೆಗಳನ್ನು ನೋಡಿ ಸಂತೋಷವಾಗಿದೆ. ಇದರಿಂದ ಪ್ರಾಣಿಗೆ ಅಥವಾ ಯುವಕರಿಗೆ ಯಾರಿಗೂ ಅಪಾಯವಾಗುವುದಿಲ್ಲ ಎಂದು ರಾಹುಲ್ ಹೇಳಿದರು.