ವಿಜಯಪುರ: ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಲ್ಲಿ ತಲೆತಲಾಂತರದಿಂದ ಸ್ಪರ್ಧಿಸಿ ಗೆಲ್ಲುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋತಿದ್ದಾರೆ. ಈ ಅನುಭವದ ಆಧಾರದಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಬೇಡ ಎಂದು ಸಿದ್ದರಾಮಯ್ಯಗೆ ಸಲಹೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ.
Advertisement
ಶನಿವಾರ ನಗರದಲ್ಲಿ ಸರ್ಕಾರದ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾಗ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಶಾನ್ಯ ಭಾರತದಲ್ಲಿ ಒಂದೂ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಸದರಿಲ್ಲ. ಕಾಂಗ್ರೆಸ್ ಅಷ್ಟರ ಮಟ್ಟಿಗೆ ಸೋತು ಸುಣ್ಣವಾಗಿದೆ ಎಂದು ಟೀಕಿಸಿದರು.