ಡೆಹ್ರಾಡೂನ್: ಹಿಮಾಚಲ ಪ್ರದೇಶದ ‘ಸಮೃದ್ಧ ಭವಿಷ್ಯ’ಕ್ಕಾಗಿ ಮತ ಚಲಾಯಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತದಾರರನ್ನು ಒತ್ತಾಯಿಸಿದ್ದಾರೆ.
ರಾಜ್ಯವು ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಲು ಮತ್ತು ಉದ್ಯೋಗವನ್ನು ಪಡೆಯಲು ಮತ ಚಲಾಯಿಸುತ್ತದೆ ಎಂದು ಹೇಳಿದ್ದಾರೆ.
ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ಮತದಾನ ಇಂದು ನಡೆಯುತ್ತಿದೆ. ರಾಜ್ಯದ 55 ಲಕ್ಷಕ್ಕೂ ಹೆಚ್ಚು ಮತದಾರರು 68 ವಿಧಾನಸಭಾ ಕ್ಷೇತ್ರಗಳಲ್ಲಿ 412 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
‘ಹಿಮಾಚಲ ಪ್ರದೇಶವು ಒಪಿಎಸ್ (ಹಳೆಯ ಪಿಂಚಣಿ ಯೋಜನೆ) ಗೆ ಮತ ಹಾಕುತ್ತದೆ. ಹಿಮಾಚಲ ಪ್ರೇದೇಶವು ಉದ್ಯೋಗಕ್ಕಾಗಿ ಮತ ಚಲಾಯಿಸುತ್ತದೆ ಮತ್ತು ಹಿಮಾಚಲ ಪ್ರದೇಶವು ‘ಹರ್ ಘರ್ ಲಕ್ಷ್ಮಿ’ಗೆ ಮತ ಹಾಕುತ್ತದೆ’ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ರಾಹುಲ್ ಗಾಂಧಿ ಪ್ರಸ್ತುತ ಮಹಾರಾಷ್ಟ್ರದಲ್ಲಿದ್ದು, ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ.
ಹಿಮಾಚಲ ಪ್ರದೇಶ ರಾಜ್ಯದಲ್ಲಿ ಶನಿವಾರ ಬಿಗಿ ಭದ್ರತೆಯ ನಡುವೆ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದೆ. ಸಂಜೆ 5 ಗಂಟೆಯವರೆಗೆ ಮತದಾನ ಮಾಡಲಿರುವ ಒಟ್ಟು 55,92,828 ಮತದಾರರು ಕಣದಲ್ಲಿರುವ 412 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.