Advertisement

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಗೇಮ್ ಚೇಂಜರ್ : ದಿಗ್ವಿಜಯ್ ಸಿಂಗ್

03:25 PM Sep 01, 2022 | Team Udayavani |

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ”ಭಾರತ್ ಜೋಡೋ” ಯಾತ್ರೆ ರಾಷ್ಟ್ರ ರಾಜಕಾರಣದಲ್ಲಿ ಗೇಮ್ ಚೇಂಜರ್ ಆಗಲಿದೆ ಎಂದು ಭಾರತ್ ಜೋಡೋ ಯಾತ್ರೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದರು.

Advertisement

ರಾಹುಲ್‍ ಗಾಂಧಿ ನೇತೃತ್ವದಲ್ಲಿ ನಡೆಯುವ ಭಾರತ ಐಕ್ಯತಾ ಯಾತ್ರೆ ಹಿನ್ನೆಲೆಯಲ್ಲಿ ಕಾಂಗ್ರಸ್ ಗುರುವಾರ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ, ದೇಶದ ಜನರನ್ನು ಒಗ್ಗೂಡಿಸುವ ಹಿನ್ನೆಲೆಯಲ್ಲಿ ದೇಶದಲ್ಲೆ ಅತಿದೊಡ್ಡ ಯಾತ್ರೆಯನ್ನು ರಾಹುಲ್ ಗಾಂಧಿ ಹಮ್ಮಿಕೊಂಡಿದ್ದಾರೆ. ಭ್ರಷ್ಟಾಚಾರ, ಜಿಎಸ್ ಟಿ,ನಿರುದ್ಯೋಗ, ಬಡತನ ಇವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತೇವೆ. ಬಿಜೆಪಿ ದೇಶದ ಜನರನ್ನ ವಿಭಜಿಸುತ್ತಿದೆ, ಕಾಂಗ್ರೆಸ್ ಪಕ್ಷದ ಮೂಲಕ ಒಂದು ಗೂಡಿಸುವ ಪ್ರಯತ್ನ ಮಾಡುತ್ತೇವೆ ಎಂದರು.

ಬಿಜೆಪಿ ಕೋಮುಭಾವನೆಗಳ ಆಧಾರದ ಮೇಲೆ ಧರ್ಮರಾಜಕಾರಣ ಮಾಡುತ್ತಿದೆ. ನಮ್ಮದು ಸರ್ವರನ್ನೊಳಗೊಂಡ ಅಭಿವೃದ್ಧಿ ಸಿದ್ಧಾಂತ. ಈ ಮೂರು ಸ್ಥರಗಳಲ್ಲಿ ಯಾತ್ರೆ ನಡೆಯಲಿದೆ. ಕರ್ನಾಟಕದಲ್ಲಿ 21 ದಿನ ಕಾಲ ಪಾದಯಾತ್ರೆ ನಡೆಯಲಿದೆ. ರಾಹುಲ್ ಗಾಂಧಿ ಜೊತೆ ಎಲ್ಲರೂ ಹೆಜ್ಜೆ ಹಾಕಲಿದ್ದಾರೆ. ಸಾವಿರಾರು ಜನ ಇದರಲ್ಲಿ ಪಾಲ್ಗೊಳ್ಳಬಹುದು. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದೆ, ಈ ಯಾತ್ರೆ ಎಲ್ಲರನ್ನೂ ತಲುಪಲಿದೆ. ಹಳ್ಳಿ,ಗ್ರಾಮ,ತಾಂಡ,ಕೇರಿ ಎಲ್ಲವನ್ನೂ ಸುತ್ತಲಿದೆ ಎಂದರು.

ಪ್ರತಿದಿನ 7 ಗಂಟೆಗೆ ಪಾದಯಾತ್ರೆ ನಡೆಯಲಿದ್ದು, ಮಧ್ಯಾಹ್ನ ಬಿಡುವಿನ ವೇಳೆಯಲ್ಲಿ 2 ಗಂಟೆ ವೇಳೆಗೆ ರಾಹುಲ್ ವಿಭಿನ್ನ ಕ್ಷೇತ್ರಗಳ ಜನರ ಜೊತೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 3.30 ಗೆ ಪಾದಯಾತ್ರೆ ಮುಂದುವರಿಯಲಿದೆ. ಮತ್ತೆ ಜನರ ಜೊತೆ ರಾಹುಲ್ ಮಾತುಕತೆ ನಡೆಯಲಿದೆ. ಅದರಲ್ಲಿ ಹಿಂದೂ,ಮುಸ್ಲಿಂ ಸೇರಿದಂತೆ ಇನ್ನಿತರ ಸಮುದಾಯದವರು ಭಾಗಿಯಾಗಲಿದ್ದಾರೆ. ರೈತರ ಜೊತೆಯೂ ಚರ್ಚೆ ನಡೆಸಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next