Advertisement

ದ್ವೇಷದ ಬಜಾರ್’ನಲ್ಲಿ ಪ್ರೀತಿಯ ಅಂಗಡಿ ತೆರೆಯಲು ಬಂದಿದ್ದೇನೆ: ದೆಹಲಿಯಲ್ಲಿ ರಾಹುಲ್ ಗಾಂಧಿ

12:55 PM Dec 24, 2022 | Team Udayavani |

ನವದೆಹಲಿ: ಕೋವಿಡ್ ಪ್ರೋಟೋಕಾಲ್‌ ಗಳನ್ನು ಅನುಸರಿಸಲು ಕೇಂದ್ರ ಆರೋಗ್ಯ ಸಚಿವರ ಕರೆಗಳ ನಡುವೆ ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆಗೆ ದೆಹಲಿಯಲ್ಲಿ ಕಾರ್ಯಕರ್ತರ ದಂಡೇ ಸೇರಿದೆ.

Advertisement

ಜೈರಾಮ್ ರಮೇಶ್, ಪವನ್ ಖೇರಾ, ಭೂಪಿಂದರ್ ಸಿಂಗ್ ಹೂಡಾ, ಕುಮಾರಿ ಸೆಲ್ಜಾ ಮತ್ತು ರಣದೀಪ್ ಸುರ್ಜೆವಾಲಾ ಸೇರಿದಂತೆ ಹಲವಾರು ಪಕ್ಷದ ನಾಯಕರು ರಾಹುಲ್ ಗಾಂಧಿಯವರೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡರು.

ನಂತರ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡ ರಾಹುಲ್ ಜೊತೆಗೂಡಿದರು. ಸೋನಿಯಾ ಗಾಂಧಿ ಅವರು ಯಾತ್ರೆಯಲ್ಲಿ ಭಾಗವಹಿಸುತ್ತಿರುವುದು ಇದು ಎರಡನೇ ಬಾರಿ. ಅಕ್ಟೋಬರ್‌ ನಲ್ಲಿ ಅವರು ಕರ್ನಾಟಕದಲ್ಲಿ ಕಾಂಗ್ರೆಸ್‌ನ ಮೆಗಾ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

ಇಂದು ಮುಂಜಾನೆ ಭಾರತ್ ಜೋಡೋ ಯಾತ್ರೆಯು ಫರಿದಾಬಾದ್‌ ನಿಂದ ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸುತ್ತಿದ್ದಂತೆ, ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅನಿಲ್ ಚೌಧರಿ ಅವರು “ರಾಹುಲ್ ಜಿಂದಾಬಾದ್” ಘೋಷಣೆಗಳ ನಡುವೆ ಬದರ್‌ಪುರ ಗಡಿಯಲ್ಲಿ ರಾಹುಲ್ ಗಾಂಧಿ, ಇತರ ಪಕ್ಷದ ನಾಯಕರು ಮತ್ತು ಯಾತ್ರಿಗಳನ್ನು ಸ್ವಾಗತಿಸಿದರು.

ಇದನ್ನೂ ಓದಿ:ಬೆಂಗಳೂರು ಯಾವತ್ತೂ ನನ್ನ ತಂಡ..; ಮನ ಬಿಚ್ಚಿ ಮಾತನಾಡಿದ ಕ್ರಿಸ್ ಗೇಲ್

Advertisement

ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ‘ನಫ್ರತ್ ಕಾ ಬಜಾರ್’ (ದ್ವೇಷದ ಮಾರುಕಟ್ಟೆ) ನಡುವೆ ‘ಮೊಹಬ್ಬತ್ ಕಿ ದುಕಾನ್’ (ಪ್ರೀತಿಯ ಅಂಗಡಿ) ತೆರೆಯುವುದು ತಮ್ಮ ಯಾತ್ರೆಯ ಉದ್ದೇಶವಾಗಿದೆ ಎಂದರು.

“ದೇಶದ ಜನಸಾಮಾನ್ಯರು ಈಗ ಪ್ರೀತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರತಿ ರಾಜ್ಯದಲ್ಲೂ ಲಕ್ಷಾಂತರ ಜನರು ಯಾತ್ರೆಗೆ ಸೇರಿದ್ದಾರೆ. ನಿಮ್ಮ ದ್ವೇಷದ ‘ಬಜಾರ್’ನಲ್ಲಿ ಪ್ರೀತಿಯ ಅಂಗಡಿ ತೆರೆಯಲು ನಾವು ಇಲ್ಲಿದ್ದೇವೆ ಎಂದು ನಾನು ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಜನರಿಗೆ ಹೇಳಿದ್ದೇನೆ” ಎಂದು ರಾಹುಲ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next