Advertisement

ರಾಹುಲ್‌ ಕಾರಿಗೆ ಕಲ್ಲು: ಬೆಂಗ್ಳೂರಲ್ಲಿ ಕಾಂಗ್ರೆಸ್‌ ಪ್ರತಿಭಟನೆ

07:50 AM Aug 05, 2017 | Team Udayavani |

ಬೆಂಗಳೂರು: ಗುಜರಾತ್‌ನ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಕಾರಿನ ಮೇಲೆ ಕಲ್ಲು ತೂರಿರುವುದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್‌ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

Advertisement

ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪರಮೇಶ್ವರ್‌, ಕಾಂಗ್ರೆಸ್‌ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದೆ .

ಬಿಜೆಪಿಯವರ ಕಲ್ಲೇಟಿಗೆ ಕಾಂಗ್ರೆಸ್‌ ಹೆದರುವುದಿಲ್ಲ. ರಾಹುಲ್‌ ಗಾಂಧಿ ಕಾರಿಗೆ ಕಲ್ಲು ಹೊಡೆದಿರುವುದರಿಂದ ಅವರ ಅಂಗ ರಕ್ಷಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ರಾಹುಲ್‌ ಗಾಂಧಿ ಮತ್ತು ಗುಜರಾತ್‌ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ರಾಹುಲ್‌ ಗಾಂಧಿಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ರಾಜಕೀಯ ದ್ವೇಷದಿಂದ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಮನೆ ಮೇಲೆ ಐಟಿ ದಾಳಿ ನಡೆಸಲಾಗಿದೆ. ರಾಹುಲ್‌ ಗಾಂಧಿ ಕಾರಿನ ಮೇಲೆ ಕಲ್ಲೆಸಿರುವುದಕ್ಕೆ ಬಿಜೆಪಿ ಕ್ಷಮೆ ಕೇಳದಿದ್ದರೆ, ಅವರ ನಾಯಕರೂ ಕಾಂಗ್ರೆಸ್‌ ಕಾರ್ಯಕರ್ತರಿಂದ ಅದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಪರಮೇಶ್ವರ್‌ ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next