Advertisement

Tamilnadu: ಚುನಾವಣಾ ಅಧಿಕಾರಿಗಳಿಂದ ರಾಹುಲ್‌ ಗಾಂಧಿ ಹೆಲಿಕಾಪ್ಟರ್‌ ತಪಾಸಣೆ

01:14 PM Apr 15, 2024 | Team Udayavani |

ಚೆನ್ನೈ: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಯ ಹೆಲಿಕಾಪ್ಟರ್‌ ಅನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.

Advertisement

ಇದನ್ನೂ ಓದಿ:Lok Sabha Election: ಚುನಾವಣಾ ಪ್ರಚಾರದ ಅಬ್ಬರ; ಕೂಲಿ ಕಾರ್ಮಿಕರಿಗೆ ಬರ!

ರಾಹುಲ್‌ ಗಾಂಧಿ ಹೆಲಿಕಾಪ್ಟರ್‌ ಹೆಲಿಪ್ಯಾಡ್‌ ನಲ್ಲಿ ಲ್ಯಾಂಡ್‌ ಆಗುತ್ತಿದ್ದಂತೆಯೇ ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಗಳು ಶೋಧ ಕಾರ್ಯ ನಡೆಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಹುಲ್‌ ಗಾಂಧಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆ ಸೇರಿದಂತೆ ಚುನಾವಣಾ ಪ್ರಚಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೆಲಿಕಾಪ್ಟರ್‌ ಮೂಲಕ ಆಗಮಿಸುತ್ತಿದ್ದರು ಎಂದು ವರದಿ ವಿವರಿಸಿದೆ.

ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಏಪ್ರಿಲ್‌ 26ರಂದು ಚುನಾವಣೆ ನಡೆಯಲಿದ್ದು, ಗಾಂಧಿ ಎರಡನೇ ಬಾರಿ ಗೆಲುವು ಸಾಧಿಸುವುದನ್ನು ಎದುರು ನೋಡುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next