ತಿರುವನಂತಪುರ: ಕೇರಳದ ಕಲ್ಪೆಟ್ಟಾದಲ್ಲಿರುವ ವಯನಾಡ್ ಸಂಸದ ರಾಹುಲ್ ಗಾಂಧಿಯವರ ಕಚೇರಿಗೆ ನುಗ್ಗಿ, ದಾಂಧಲೆ ನಡೆಸಲಾಗಿದೆ.
ಶುಕ್ರವಾರ ಈ ಘಟನೆ ನಡೆದಿದೆ. ಸ್ಟೂಡೆಂಟ್ಸ್ ಫೆಡರೇಷನ್ (ಎಸ್‌ಎಫ್ಐ) 100 ಮಂದಿ ಕಾರ್ಯಕರ್ತರು ಈ ಕೃತ್ಯವೆಸಗಿದ್ದಾರೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳದಲ್ಲಿನ ಗುಡ್ಡಗಾಡು ಪ್ರದೇಶಗಳ ಕಾಡುಗಳಲ್ಲಿ ಬಫರ್ ವಲಯ ರಚಿಸುವ ವಿಚಾರದಲ್ಲಿ ಸಂಸದ ರಾಹುಲ್ ಗಾಂಧಿ ಮಧ್ಯಪ್ರವೇಶಿಸಿಲ್ಲ ಎನ್ನುವ ಕಾರಣಕ್ಕೆ ಆಡಳಿತ ಪಕ್ಷ ಸಿಪಿಎಂನ ವಿದ್ಯಾರ್ಥಿ ಸಂಘಟನೆಯಾಗಿರುವ ಎಸ್‌ಎಫ್ಐ ಪ್ರತಿಭಟನೆ ನಡೆಸುತ್ತಿತ್ತು.
ಪ್ರತಿಭಟನೆಯಲ್ಲಿದ್ದ ಸುಮಾರು 80-100 ಕಾರ್ಯಕರ್ತರು ಕಚೇರಿಗೆ ನುಗ್ಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Related Articles
ಘಟನೆಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಖಂಡಿಸಿದ್ದಾರೆ. “ಪ್ರತಿಯೊಬ್ಬರಿಗೂ ಮಾತನಾಡುವ ಮತ್ತು ಹೋರಾಟ ಮಾಡುವ ಹಕ್ಕಿದೆ. ಆದರೆ ಈ ರೀತಿ ಹಿಂಸಾಚಾರ ಒಪ್ಪಲಾಗುವುದಿಲ್ಲ. ತಪ್ಪಿತಸ್ಥರ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ’ ಎಂದಿದ್ದಾರೆ.