ನವದೆಹಲಿ: ರಾಹುಲ್ ಗಾಂಧಿ ಅವರು ಭಾರತೀಯ ಸೇನೆಯನ್ನು ಅವಮಾನಿಸುತ್ತಿದ್ದಾರೆ ಮಾತ್ರವಲ್ಲದೆ ರಾಷ್ಟ್ರದ ಘನತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ಅವರು ಶನಿವಾರ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಮ್ಮ ಯೋಧರಿಗೆ ಪೆಟ್ಟು ಬೀಳುತ್ತಿದೆ, ಆದರೆ ಭಾರತ ಸರ್ಕಾರ ನಿದ್ರಿಸುತ್ತಿದೆ ಎಂದು ಹೇಳಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದಾರೆ
ಚೀನ 2,000 ಚದರ ಕಿಲೋಮೀಟರ್ ಭಾರತೀಯ ಭೂಪ್ರದೇಶವನ್ನು ವಶಪಡಿಸಿಕೊಂಡಿದೆ, 20 ಭಾರತೀಯ ಸೈನಿಕರನ್ನು ಕೊಂದಿದೆ ಮತ್ತು ಅರುಣಾಚಲ ಪ್ರದೇಶದಲ್ಲಿ ನಮ್ಮ ಯೋಧರನ್ನು ಥಳಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಇದನ್ನೂ ಓದಿ:ಬಿಜೆಪಿಗೆ ಇರಿಸು ಮುರಿಸು; ಲೆಕ್ಕ ಕೇಳಲು ಶ್ರೀನಿವಾಸ ಪ್ರಸಾದ್ ಯಾರು?: ವಿಶ್ವನಾಥ್ ತಿರುಗೇಟು
ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ರಿಜಿಜು, ರಾಹುಲ್ ಗಾಂಧಿ ಭಾರತೀಯ ಸೇನೆಯನ್ನು ಅವಮಾನಿಸುತ್ತಿದ್ದಾರೆ ಮಾತ್ರವಲ್ಲದೆ ರಾಷ್ಟ್ರದ ಘನತೆಗೆ ಧಕ್ಕೆ ತರುತ್ತಿದ್ದಾರೆ. ಅವರು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಮಸ್ಯೆಯಲ್ಲ, ಅವರು ದೇಶಕ್ಕೆ ದೊಡ್ಡ ಮುಜುಗರವಾಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.ನಮ್ಮ ಸೇನೆಯ ಬಗ್ಗೆ ಜನರು ಹೆಮ್ಮೆಪಡುತ್ತಾರೆ ಎಂದು ಹೇಳಿದರು.