ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.18ರಂದು ಬೆಳಗ್ಗೆ 11:30 ಗಂಟೆಗೆ ನಡೆಯುವ ಕಾಂಗ್ರೆಸ್ ಪಕ್ಷದ ರ್ಯಾಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಇನ್ನಿತರ ನಾಯಕರು ಭಾಗಿಯಾಗಲಿದ್ದಾರೆ.
Advertisement
ತದನಂತರ 1:30ಕ್ಕೆ ಬೆಂಗಳೂರಿಗೆ ತೆರಳಿ ಅಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳ ಜತೆಗಿನ ಸಂವಾದದಲ್ಲಿ ಪಾಲ್ಗೊಳ್ಳುವರು. ಹೈದರಾಬಾದ್‌ನಿಂದ ಹೆಲಿಕಾಪ್ಟರ್ ಮೂಲಕ ಕಲಬುರಗಿಗೆ ಆಗಮಿಸಲಿದ್ದಾರೆ. ರಾಹುಲ್ ಗಾಂಧಿ ಆಗಮನದೊಂದಿಗೆ ಕಾಂಗ್ರೆಸ್ ಪ್ರಚಾರಕ್ಕೆ ರಾಜ್ಯದಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು.
Related Articles
Advertisement
ಶುಕ್ರವಾರ ಸಂಜೆ ಖಂಡ್ರೆ ಸಭೆ: ಮಾ.18 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಲಬುರಗಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಾ.16ರಂದು ಸಂಜೆ 5 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಪಕ್ಷದ ಪ್ರಮುಖರ ಪೂರ್ವ ಸಿದ್ಧತಾ ಸಭೆ ಕರೆಯಲಾಗಿದೆ. ಸಭೆಯಲ್ಲಿ ಪಕ್ಷದ ಕಾರ್ಯಾಧ್ಯಕ್ಷರು ಸಿದ್ಧತೆಗಳ ಬಗ್ಗೆ ಚರ್ಚಿಸುವರು. ಜತೆಗೆ ಪಕ್ಷದ ಮುಖಂಡರೊಂದಿಗೆ ಸಮಾಲೋಚಿಸುವರು ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಪ್ರಚಾರ ಸಮಿತಿ ಅಧ್ಯಕ್ಷ ಜಗನ್ನಾಥ ಗೋಧಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ, ಮುಖಂಡರಾದ ಸಿ.ಬಿ. ಪಾಟೀಲ ಓಕಳಿ, ತಿಪ್ಪಣ್ಣಪ್ಪ ಕಮಕನೂರ, ಜಿಪಂ ಪ್ರತಿಪಕ್ಷದ ನಾಯಕ ಶಿವಾನಂದ ಪಾಟೀಲ, ಯುವ ಘಟಕದ ಅಧ್ಯಕ್ಷ ಈರಣ್ಣ ಝಳಕಿ ಹಾಗೂ ಮುಂತಾದವರಿದ್ದರು.
ಚಿತ್ತಾಪುರದ ಜನರ ಆಶೀರ್ವಾದವಿ¨ ಚಿಂಚೋಳಿ ಕ್ಷೇತ್ರಕ್ಕೆ ಬಂದು ಚುನಾವಣೆಗೆ ನಿಂತು ಗೆದ್ದು ತೋರಿಲಿ ಎಂದು ಡಾ| ಉಮೇಶ ಜಾಧವ ಸವಾಲು ಹಾಕಿರುವುದಕ್ಕೆ ತೀಕ್ಷಣವಾಗಿ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಚಿತ್ತಾಪುರ ಕ್ಷೇತ್ರದ ಜನರು ನನಗೆ ಆರ್ಶೀವಾದ ಮಾಡಿದ್ದಾರೆ. ಅಲ್ಲಿ ನಾನು ಸುಖವಾಗಿದ್ದೇನೆ. ಚಿಂಚೋಳಿಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಉದ್ಬವಿಸಲ್ಲ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಕಲಬುರಗಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂದು ಸುದ್ದಿ ಹಬ್ಬಿಸಲಾಗಿತ್ತು. ಇಷ್ಟಕ್ಕೂ ಚಿಂಚೋಳಿಯಲ್ಲಿ ನಾಯಕರ ಕೊರತೆಯಿಲ್ಲ. ಸಾಕಷ್ಟು ಜನರಿದ್ದಾರೆ. ಅವರೇ ಸೇರಿ ಮುಂದಿನ ದಿನಗಳಲ್ಲಿ ತಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ತಮ್ಮದೇನಿದ್ದರೂ ಅಭಿವೃದ್ಧಿ ಕೆಲಸಗಳ ಮೇಲೆ ಚುನಾವಣೆ ನಡೆಯುವುದು. ಮತದಾರರು ಕೈ ಬಿಡಲ್ಲ ಎನ್ನುವ ವಿಶ್ವಾಸವಿದೆ. ಬಣ್ಣದ ಮಾತುಗಳಿಗೆ ಜನರು ಮರಳಾಗುವುದಿಲ್ಲ. ಚುನಾವಣೆ ಸಮಯದಲ್ಲಿ ಟೀಕೆ-ಟಿಪ್ಪಣಿಗಳು ಬರುತ್ತಲೇ ಇರುತ್ತವೆ. ಸಮುದಾಯಅಸಮಾಧಾನ ಎಂಬ ವರದಿಗಳು ಬರುತ್ತಿರುತ್ತವೆ.
ಪ್ರಿಯಾಂಕ್ ಖರ್ಗೆ, ಸಚಿವರು