Advertisement
ಮಿತ್ರ ಪಕ್ಷ ಕಾಂಗ್ರೆಸ್‌ನಲ್ಲಿ ಉದ್ಭವಿಸಿರುವ ಭಿನ್ನಮತವನ್ನು ಶಮನ ಮಾಡುವ ಬಗ್ಗೆ ಪ್ರಸ್ತಾಪಿಸಿರುವ ಸಿಎಂ, ಸಂಪುಟ ವಿಸ್ತರಣೆಗೆ ಮುನ್ನ ಪ್ರಮುಖ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ರಾಹುಲ್ ಗಾಂಧಿ ಆಸಕ್ತಿ ತೋರಿದ್ದಾರೆ. ಹೀಗಾಗಿ ಮೊದಲು ಸುಮಾರು 30 ನಿಗಮ-ಮಂಡಳಿಗೆ ಅಧ್ಯಕ್ಷರನ್ನು ನೇಮಿಸಿ ಬಳಿಕ ಸಂಪುಟ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Related Articles
Advertisement
ಸಂಪುಟ ಮತ್ತೆ ಕಗ್ಗಂಟಾಗುವ ಆತಂಕ:ಸಂಪುಟ ವಿಸ್ತರಣೆ ಮತ್ತೆ ಗೊಂದಲ ಹೆಚ್ಚಿಸುವ ಆತಂಕವನ್ನು ರಾಹುಲ್ ಗಾಂಧಿ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ಗೆ ಹಂಚಿಕೆಯಾಗಿರುವ ಬಹುತೇಕ ಪ್ರಮುಖ ಖಾತೆಗಳನ್ನು ಈಗಾಗಲೇ ಹಂಚಿಕೆ ಮಾಡಲಾಗಿದೆ. ಪ್ರಸ್ತುತ ಸಂಪುಟ ಸೇರಲು ತುದಿಗಾಲಲ್ಲಿ ನಿಂತಿರುವವರು ಹಿರಿಯರಾಗಿದ್ದು, ಅವರಿಗೆ ಸಣ್ಣ ಪುಟ್ಟ ಖಾತೆಗಳನ್ನು ವಹಿಸಿದರೆ ಅಸಮಾಧಾನಗೊಳ್ಳಬಹುದು. ಈಗಾಗಲೇ ಹಂಚಿಕೆ ಮಾಡಿರುವ ಖಾತೆಗಳನ್ನು ಬದಲಾವಣೆ ಮಾಡಿದರೆ ಹಾಲಿ ಸಚಿವರು ಸಿಟ್ಟಾಗಬಹುದು. ಹೀಗಾಗಿ ಈ ವಿಚಾರದಲ್ಲಿ ಎಚ್ಚರಿಕೆಯಿಂದ ತೀರ್ಮಾನ ಕೈಗೊಳ್ಳಬೇಕಾಗುತ್ತದೆ. ಆದ್ದರಿಂದ ಮೊದಲು ನಿಗಮ-ಮಂಡಳಿ ಅಧ್ಯಕ್ಷರ ನೇಮಕ ಪ್ರಕ್ರಿಯೆ ಮುಗಿಸಿ ನಂತರ ಸಂಪುಟ ವಿಸ್ತರಣೆ ಮಾಡಿ ಎಂಬ ಸಲಹೆಯನ್ನು ಅವರು ಮುಖ್ಯಮಂತ್ರಿಯವರಿಗೆ ನೀಡಿದ್ದಾರೆ.ಅಲ್ಲದೆ, ಯಾವುದಕ್ಕೂ ಈ ಕುರಿತು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ಮಾಡಿ. ರಾಜಕೀಯ ಪರಿಸ್ಥಿತಿಗೆ ತಕ್ಕಂತೆ ಯಾವ ನಿರ್ಣಯ ಸೂಕ್ತ ಎಂಬುದನ್ನು ತಿಳಿದುಕೊಂಡು ಬಳಿಕ ಯಾವುದು ಮೊದಲು ಎಂಬುದನ್ನು ತೀರ್ಮಾನಿಸಿ ಎಂಬ ಸಲಹೆಯನ್ನೂ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೊಸ ಬಜೆಟ್‌ಗೆ ರಾಹುಲ್ ಗ್ರೀನ್‌ಸಿಗ್ನಲ್
ಸಮ್ಮಿಶ್ರ ಸರ್ಕಾರದಲ್ಲಿ ಹೊಸ ಬಜೆಟ್ ಮಂಡಿಸುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪ್ರಸ್ತಾವನೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮತಿಸಿದ್ದಾರೆ. ಇದರಿಂದಾಗಿ ಹೊಸ ಬಜೆಟ್ ಬೇಡ ಎಂಬ ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಿದೆ.