ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರಪ್ರದೇಶದ ಅಮೇಠಿ ಕ್ಷೇತ್ರದ ಜನರ ವಿಶ್ವಾಸ ಕಳೆದುಕೊಂಡು ಕೇರಳದ ವಯನಾಡಿನಲ್ಲಿ ಅಡಗಿ ಕುಳಿತಿದ್ದಾರೆ.
ಕಾಂಗ್ರೆಸ್‌ನ ಪ್ರಧಾನ ಮಂತ್ರಿ ಅಭ್ಯರ್ಥಿಗೆ ಏಕೆ ಇಂತಹ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗ್ಯವಾಡಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಮೇಥಿ ಮತದಾರರು ಏಕೆ ರಾಹುಲ್ ಗಾಂ ಧಿಯನ್ನು ಧಿಕ್ಕರಿಸಿದ್ದಾರೆ ಎಂದು ತಿಳಿಸಬೇಕು. ಶಿವಮೊಗ್ಗದಲ್ಲಿ ಎನ್‌ಡಿಎ ಅಭ್ಯರ್ಥಿ ಎರಡೂವರೆ-ಮೂರು ಲಕ್ಷ ಮತಗಳ ಅಂತರದಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ರಾಹುಲ್ ಭೇಟಿ ಬಳಿಕ ಮತ್ತೆ 50 ಸಾವಿರ ಲೀಡ್ ಹೆಚ್ಚಲಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆ ಮತದಾರರ ಮೇಲೆ ಪರಿಣಾಮ ಬೀರಿಲ್ಲ. ಕಾಂಗ್ರೆಸ್‌ನವರ ಅಲ್ಪಸಂಖ್ಯಾಕರ ಓಲೈಕೆ ಚಿಂತನೆ ಒಬಿಸಿ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ. ಅಲ್ಪಸಂಖ್ಯಾಕರ ತುಷ್ಟೀಕರಣಕ್ಕೆ ಕಾಂಗ್ರೆಸ್ ಬೆಲೆ ತೆರಬೇಕಾಗುತ್ತದೆ ಎಂದರು. ಮೊದಲ ಹಂತದಲ್ಲಿ ಚುನಾವಣೆ ನಡೆದ ರಾಜ್ಯದ 14 ಕ್ಷೇತ್ರಗಳಲ್ಲೂ ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.